2021ರಲ್ಲಿ ಭಾರತಕ್ಕೆ ಯುಎನ್‌ಎಸ್‌ಸಿ ಅಧ್ಯಕ್ಷ ಪಟ್ಟ
Team Udayavani, Jun 20, 2020, 6:56 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ತಾತ್ಕಾಲಿಕ ಸದಸ್ಯ ಸ್ಥಾನಕ್ಕೆ ಆಯ್ಕೆಯಾಗಿರುವ ಭಾರತ, 2021ರ ಆಗಸ್ಟ್ನಲ್ಲಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೇರಲಿದೆ ಎಂದು ವಿಶ್ವಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಸದಸ್ಯ ರಾಷ್ಟ್ರಗಳಿಗೆ ಅವರ ದೇಶದ ಹೆಸರಿನ ಮೊದಲ ಅಕ್ಷ ರದ ಆಧಾರದಲ್ಲಿ ಆವರ್ತನ ಪದ್ಧತಿಯಡಿ ಅಧ್ಯಕ್ಷ ಸ್ಥಾನ ಬರಲಿದೆ.
ಈ ನಡುವೆ, ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿಯಾಗಿರುವ ಟಿ.ಎಸ್. ತಿರುಮೂರ್ತಿ ಅವರು, ‘ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಲಗ್ಗೆಯಿಟ್ಟಿರುವ ಭಾರತ, ಮಂಡಳಿಯ ಕಾರ್ಯವೈಖರಿಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ” ಎಂದಿದ್ದಾರೆ.
ಭದ್ರತಾ ಮಂಡಳಿಯ ಕಾರ್ಯವೈಖರಿಯು 21ನೇ ಶತಮಾನದ ಭೌಗೋಳಿಕ-ರಾಜಕೀಯ ಸಮಸ್ಯೆಗಳಿಗೆ ಅನುಗುಣವಾಗಿಲ್ಲ. ಹಾಗಾಗಿ, ಅದರಲ್ಲಿ ಸುಧಾರಣೆ ಆಗಬೇಕು ಎಂಬ ದಶಕಗಳ ಬೇಡಿಕೆಯನ್ನು ಭಾರತ ಸಾಕಾರಗೊಳಿಸಲು ಪ್ರಯತ್ನಿಸಲಿದೆ” ಎಂದು ಅವರು ಗುರುವಾರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ