ಜಿಲ್ಲೆಯಲ್ಲಿ ಅಟಲ್ ಭೂಜಲ್ ಅನುಷ್ಠಾನ
Team Udayavani, Jun 20, 2020, 6:32 AM IST
ಚಿಕ್ಕಬಳ್ಳಾಪುರ: ಅಟಲ್ ಭೂಜಲ್ ಯೋಜನೆಯನ್ನು ಜಿಲ್ಲೆಯ ಆರು ತಾಲೂಕುಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಟಲ್ ಭೂಜಲ್ ಯೋಜನೆ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತರ್ಜಲ ಅಭಿವೃದ್ಧಿ, ಜಲ ಸಂರಕ್ಷಣೆ ಹಾಗೂ ನೀರಿನ ಮಿತವ್ಯಯ ಬಳಕೆಯಿಂದ ನೀರಿನ ಕೊರತೆ ನಿವಾರಿಸಲು ಹಾಗೂ ರೈತರ ಆದಾಯವ ನ್ನು ದ್ವಿಗುಣಗೊಳಿಸುವ ಮತ್ತು ಲಭ್ಯವಿರುವ ಸಂಪ ನ್ಮೂಲ ಬಳಸಿಕೊಂಡು ಎಲ್ಲಾ ಇಲಾಖೆ ಕಾರ್ಯಕ್ರಮಗಳ ಒಗ್ಗೂಡಿಸುವಿಕೆಯಿಂದ ಸಮಗ್ರ ರೀತಿಯಲ್ಲಿ ನಿರ್ವಹಿಸುವ ಯೋಜನೆ ರೂಪಿಸಲಾಗಿದೆ ಎಂದರು.
ಯಶಸ್ವಿಗೊಳಿಸಲು ಸೂಚನೆ: ಅಟಲ್ ಭೂಜಲ್ ಯೋಜನೆಯ ಅನುದಾನವು ಜಿಲ್ಲೆಗೆ ಲಭ್ಯವಿದ್ದು, ಅಗತ್ಯ ದತ್ತಾಂಶದ ವಿವರಗಳನ್ನು ಗ್ರಾಮ ಪಂಚಾಯಿತಿ ವಾರು ಒದಗಿಸುವಂತೆ ಹಾಗೂ ವಿವಿಧ ಇಲಾಖಾವಾರು ಮುಖ್ಯಸ್ಥರು ಆಯಾ ಇಲಾಖೆಯ ಕಾರ್ಯಕ್ರಮಪಟ್ಟಿ ತಯಾರಿಸಿ, ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲಶಕ್ತಿ ಸಚಿವಾಲಯ ಪ್ರಸ್ತಾಪಿಸಿರುವ ಭೂಜಲ್ ಯೋಜನೆ ಕೇಂದ್ರ ವಲಯ ಯೋಜನೆಯಾ ಗಿದ್ದು, ರಾಜ್ಯ ಸರ್ಕಾರಿ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು, ರೈತರು ಮತ್ತು ಇತರ ಆಸಕ್ತ ದಾರರನ್ನು ಒಳಗೊಂಡು ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ಸಮಗ್ರ ರೀತಿಯಲ್ಲಿ ನಿರ್ವಹಿಸಲು ವಿನ್ಯಾಸ ಗೊಳಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.