ಕೋವಿಡ್: ಇನ್ನೂ 1128 ಮಂದಿಯ ವರದಿ ಬಾಕಿ
Team Udayavani, Jun 20, 2020, 6:44 AM IST
ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಒಂದೇ ಒಂದು ಸೋಂಕು ವರದಿ ಬಂದಿರಲಿಲ್ಲ. ಶುಕ್ರವಾರ ಒಂದು ವರದಿ ದೃಢವಾಗಿದೆ. ಇನ್ನೂ 1128 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಸದ್ಯ 281 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ವಾರ್ಡ್‌ನಲ್ಲಿ ಸದ್ಯ 28 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 17668 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 2875 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 5944 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 8821 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 16372 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 14529 ವರದಿ ನಕಾರಾತ್ಮಕವಾಗಿದೆ. ಒಟ್ಟು 1128 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 310 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.