ವಾಡಿಯಲ್ಲಿ ಮಾಸ್ಕ್ ಧರಿಸದ ವ್ಯಾಪಾರಿಗಳಿಗೆ ದಂಡ
Team Udayavani, Jun 20, 2020, 7:31 AM IST
ವಾಡಿ: ಲಾಕ್‌ಡೌನ್ ಸಡಿಲಿಕೆ ನಂತರ ಸಾರ್ವಜನಿಕ ಓಡಾಟಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು. ಈಗ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಖಾಕಿ ಪಡೆ ಮತ್ತೆ ಜಾಗೃತಗೊಂಡಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಮೂಲಕ ಸಾಂಕ್ರಾಮಿಕ ರೋಗದ ಎಚ್ಚರಿಕೆ ನೀಡಲಾಗುತ್ತಿದೆ.
ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ವ್ಯಾಪಾರ ನಡೆಸುತ್ತಿರುವವರನ್ನು ಗುರಿಯಾಗಿಟ್ಟುಕೊಂಡು ವಿಶೇಷ ಪೇದೆ ದತ್ತು ಜಾನೆ, ದೊಡ್ಡಪ್ಪ ಪೂಜಾರಿ ಅವರೊಂದಿಗೆ ಫೀಲ್ಡಿಗಿಳಿದಿರುವ ಪಿಎಸ್‌ಐ ವಿಜಯಕುಮಾರ ಭಾವಗಿ, ಕೋವಿಡ್-19 ಸಾಂಕ್ರಾಮಿಕ ರೋಗ ಕೋವಿಡ್ ನಿಯಂತ್ರಣದ ಕಾನೂನು ಉಲ್ಲಂಘಿಸಿದ ಠಾಣಾ ವ್ಯಾಪ್ತಿಯ ರಾವೂರ, ವಾಡಿ ಹಾಗೂ ನಾಲವಾರ ವಲಯದ 45 ಜನ ವರ್ತಕರಿಗೆ ತಲಾ ರೂ. 100ರಂತೆ ಒಟ್ಟು 4500 ರೂ. ದಂಡ ವಿಧಿಸುವ ಮೂಲಕ ಕೋವಿಡ್ ರೋಗದಿಂದ ಅಂತರ ಕಾಯ್ದುಕೊಳ್ಳದವರಿಗೆ ಕಾನೂನಿನ ಬಿಸಿ ಮುಟ್ಟಿಸಿದ್ದಾರೆ.
ಮುಖಕ್ಕೆ ಮಾಸ್ಕ್ ಧರಿಸದೆ ಮನೆಯಿಂದ ಹೊರಗಡೆ ಬರಬೇಡಿ. ಯಾರನ್ನಾದರೂ ಮತ್ತು ಯಾವುದೇ ವಸ್ತುವನ್ನು ಮುಟ್ಟಿದಾಕ್ಷಣ ಕೈಗಳನ್ನು ಸ್ಯಾನಿಟೈಸರ್‌ನಿಂದ ತೊಳೆದುಕೊಳ್ಳಿ. ಹಣ್ಣು, ತರಕಾರಿ, ದಿನಸಿ ವ್ಯಾಪಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆರಂಭಿಕವಾಗಿ ವರ್ತಕರಿಗೆ ದಂಡ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಧರಿಸದ ಗ್ರಾಹಕರಿಗೆ ಮತ್ತು ರಸ್ತೆ ಮೇಲೆ ಸಂಚರಿಸುವ ಸಾರ್ವಜನಿಕರಿಗೂ ಮುಲಾಜಿಲ್ಲದೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.