ಕೆಲಸಗಳಾಗುತ್ತಿಲ್ಲ: ಸ್ವಪಕ್ಷೀಯರಿಂದಲೇ ಅಸಮಾಧಾನ
Team Udayavani, Jun 20, 2020, 7:40 AM IST
ಬೆಂಗಳೂರು: ಬಿಜೆಪಿ ಸರ್ಕಾರವಿದ್ದರೂ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ , ವರ್ಗಾವಣೆ ಸೇರಿದಂತೆ ಇತರೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸ್ವಪಕ್ಷೀಯ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸದ್ಯದಲ್ಲೇ ಸಿಎಂ ಯಡಿಯೂರಪ್ಪ ಅವರೊಂದಿಗೆ ವಿಭಾಗವಾರು ಶಾಸಕರ ಸಭೆ ನಡೆಸಲು ಪ್ರಯತ್ನಿಸುವ ಭರವಸೆ ನೀಡಿ ಸಮಾಧಾನಪಡಿಸಿದ್ದಾರೆ.
ಎಚ್.ವಿಶ್ವನಾಥ್ ಅಸಮಾಧಾನಹೊರತುಪಡಿಸಿದರೆ ಪರಿಷತ್‌ಗೆ ಬಿಜೆಪಿಯ 4 ಮಂದಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಗುರುವಾರ ಎಲ್ಲವೂ ಸುಖಾಂತ್ಯವಾಯಿತು ಎಂಬ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಅತೃಪ್ತ ಶಾಸಕರು ಕಟೀಲ್ ಅವರನ್ನು ಭೇಟಿಯಾಗಿ ಸರ್ಕಾರದಲ್ಲಿ ತಮ್ಮ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಅನಿಲ್ ಬೆನಕೆ, ಅಭಯ್ ಪಾಟೀಲ್, ಕರಾವಳಿ ಭಾಗದ ಶಾಸಕರು ಸೇರಿದಂತೆ ಹಲವರು ಕಟೀಲ್ ಅವರನ್ನು ಭೇಟಿಯಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಸ್ಪಂದಿಸಿದ ನಳಿನ್ ಕುಮಾರ್ ಕಟೀಲ್, ಈ ರೀತಿಯ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಲು ಕ್ರಮ ವಹಿಸಲಾಗುವುದು. ಅಗತ್ಯ ಬಿದ್ದರೆ ಮುಖ್ಯಮಂತ್ರಿಗಳನ್ನು ಪಕ್ಷದ ಕಚೇರಿಗೆ ಕರೆಸಿ ಗೊಂದಲಗಳನ್ನು ಬಗೆಹರಿಸಿಕೊಳ್ಳೋಣ. ಈ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದು ಕಿವಿಮಾತು ಹೇಳಿದ್ದಾರೆ ಎಂದು ನಿಯೋಗದಲ್ಲಿದ್ದ ಶಾಸಕರೊಬ್ಬರು ತಿಳಿಸಿದರು. ಸದ್ಯದಲ್ಲೇ ಮುಖ್ಯಮಂತ್ರಿಗಳ ವತಿಯಿಂದ ಕಂದಾಯ ವಿಭಾಗವಾರು ಶಾಸಕರ ಸಭೆ ನಡೆಸಲು ಪ್ರಯತ್ನಿಸಲಾಗುವುದು. ಆಗ ಶಾಸಕರು ಮುಕ್ತವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.
ಅತೃಪ್ತ ಶಾಸಕರ ನಿಯೋಗದಲ್ಲಿ ಕರಾವಳಿ ಭಾಗದ ಕೆಲ ಶಾಸಕರು ಇದ್ದರು ಎಂಬ ಮಾತುಗಳಿವೆ. ಆದರೆ ಇದನ್ನು ಅಲ್ಲಗಳೆದಿರುವ ಕೆಲ ಶಾಸ ಕರು, ಪಕ್ಷದ ರಾಜ್ಯಾಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆಗಿರುವುದರಿಂದ ಪಕ್ಷ ಸಂಘಟನೆ ಹಾಗೂ ಸ್ಥಳೀಯ ವಿಚಾರಗಳ ಬಗ್ಗೆ ಆಗಾಗೆ ಚರ್ಚೆ ಮಾಡುತ್ತಿರುತ್ತೇವೆ. ಈ ನಡುವೆ ಬೇರೆ ಭಾಗದ ಕೆಲ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳು, ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.