ಕಾಕಡೆ ಮಹಿಳಾ ವಿವಿ ಪ್ರಭಾರ ಕುಲಪತಿ
Team Udayavani, Jun 20, 2020, 7:53 AM IST
ವಿಜಯಪುರ: ಪ್ರೊ| ಸಬಿಹಾ ಭೂಮಿಗೌಡ ಅವರ ನಿವೃತ್ತಿಯಿಂದ ಶುಕ್ರವಾರ ತೆರವಾಗಿದ್ದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಭಾರ ಕುಲಪತಿಯಾಗಿ ಡಾ| ಓಂಕಾರ ಕಾಕಡೆ ಅಧಿಕಾರ ಸ್ವೀಕರಿಸಿದರು.
ಸತತ ನಾಲ್ಕು ವರ್ಷಗಳ ಸೇವೆ ನಂತರ ಜೂ. 19ರಂದು ಸಬಿಹಾ ನಿವೃತ್ತಿಯಾದರು. ಸಬಿಹಾ ಅವರಿಂದ ತೆರವಾದ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಕುಲಾಧಿಪತಿಗಳಾದ ರಾಜ್ಯಪಾಲ ವಜುಬಾಯಿ ವಾಲಾ ಅವರು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆ-2000ನ ಸೆಕ್ಷನ್ 16 (2)ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ನೂತನ ಹಂಗಾಮಿ ಕುಲಪತಿ ನೇಮಕ ಮಾಡಿದ್ದಾರೆ.
ಶುಕ್ರವಾರ ಜರುಗಿದ ಸರಳ ಸಮಾರಂಭದಲ್ಲಿ ಸನ್ಮಾನಗೊಂಡ ನಿರ್ಗಮಿತ ಕುಲಪತಿ ಡಾ| ಸಬಿಹಾ ಭೂಮಿಗೌಡ ಅವರು ನೂತನ ಪ್ರಭಾರ ಕುಲಪತಿ ಡಾ| ಓಂಕಾರ ಕಾಕಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಿವೃತ್ತರಾದ ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳುತ್ತಿದ್ದಾರೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇವರ ಅಧಿಕಾರ ಅವಧಿ 20-6-2020ರಿಂದ 13-12-2020ರವರೆಗೆ ಅಥವಾ ನೂತನ ಕುಲಪತಿಗಳ ನೇಮಕ ಇದರಲ್ಲಿ ಯಾವುದು ಮೊದಲೋ ಅಲ್ಲಿವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.