ಯುವಶಕ್ತಿ ಕಾಂಗ್ರೆಸ್ ಬೆನ್ನೆಲುಬು
Team Udayavani, Jun 20, 2020, 9:15 AM IST
ಸಾಗರ: ಯುವಶಕ್ತಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಯುವ ಕಾಂಗ್ರೆಸ್ ಘಟಕ ಸದೃಢವಾಗಿದ್ದರೆ ಪಕ್ಷ ಸಂಘಟನೆ ಕೆಲಸ ಸುಲಭವಾಗುತ್ತದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಗಾಂಧಿ ಮಂದಿರದಲ್ಲಿ ಶುಕ್ರವಾರ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷಕ್ಕೆ ಯುವಕರ ಮೂಲಕ ಹೊಸ ಕಾರ್ಯಕರ್ತರ ಸೇರ್ಪಡೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಪ್ರಸ್ತುತ ಯುವಜನರಲ್ಲಿ ಇಚ್ಛಾಶಕ್ತಿಯ ಕೊರತೆ ಕಾಣುತ್ತಿದೆ. ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವಲ್ಲಿ ಅವರಿಗೆ ನೇರವಾದ ನಿಲುವು ಇಲ್ಲದ ಕಾಲಘಟ್ಟ ಇದಾಗಿದೆ. ಕಾಂಗೆಸ್ ಪಕ್ಷದ ಚೌಕಟ್ಟಿನಲ್ಲಿ ಯುವಜನರು ಬರುವುದರಿಂದ ಸಾಮಾಜಿಕ ನ್ಯಾಯ, ಬಡವರ ಪರವಾದ ನಿಲುವು, ಹೋರಾಟದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಿದೆ. ಯುವಕರಿಗೆ ಪಕ್ಷದ ಪರವಾಗಿ ಬೆಂಬಲ ನೀಡುವುದರಿಂದ ಅವರಲ್ಲಿಯೂ ನಾಯಕತ್ವ ಗುಣ ಬೆಳೆಯುತ್ತದೆ ಎಂದರು.
ಸಾಗರ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಯಶವಂತ್ ಫಣಿ ಮಾತನಾಡಿ, ನಗರವ್ಯಾಪ್ತಿಯಲ್ಲಿ ಪಕ್ಷಕ್ಕೆ ಹೆಚ್ಚು ಯುವಕರನ್ನು ಸೇರ್ಪಡೆ ಮಾಡಲಾಗುತ್ತದೆ ಎಂದರು. ಜಿಪಂ ಸದಸ್ಯರಾದ ಭೀಮನೇರಿ ಶಿವಪ್ಪ, ಅನಿತಾಕುಮಾರಿ, ಪ್ರಮುಖರಾದ ಅಶೋಕ್ ಬೇಳೂರು, ನಾಗರಾಜಸ್ವಾಮಿ, ತುಕಾರಾಮ ಶಿರವಾಳ, ಗಣಪತಿ ಮಂಡಗಳಲೆ, ವಿ. ಶಂಕರ್, ಪ್ರೇಮ್ ಸಿಂಗ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.