ಸರ್ಕಾರದ ನಿರ್ದೇಶನ ಪಾಲನೆಗೆ ತಾಕೀತು

Team Udayavani, Jun 20, 2020, 1:35 PM IST

20-January-13

ಸಿಂದಗಿ: ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ವಿತರಿಸಲು ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ವತಿಯಿಂದ ಶಿಕ್ಷಣ ಇಲಾಖೆಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ನೀಡಲಾಯಿತು.

ಸಿಂದಗಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅನೇಕ ಸವಾಲು ಹೊಂದಿದ್ದು ಸರ್ಕಾರದ ನಿರ್ದೇಶನದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪ್ರಸನ್ನಕುಮಾರ ಹೇಳಿದರು.

ಪಟ್ಟಣದ ಆರ್‌.ಡಿ. ಪಾಟೀಲ ಕಾಲೇಜಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹರಡುವ ಹಿನ್ನೆಲೆಯಲ್ಲಿ ಈ ಬಾರಿಯ ಪರೀಕ್ಷೆ ಒಂದು ದೊಡ್ಡ ಸವಾಲಾಗಿದೆ. ಪರೀಕ್ಷೆಯನ್ನು ಅತ್ಯಂತ ಎಚ್ಚರದಿಂದ ಮಕ್ಕಳ ಆರೋಗ್ಯದ ದೃಷ್ಟಿಯಲ್ಲಿಟ್ಟುಕೊಂಡು ನಟೆಸಬೇಕಿದೆ ಎಂದರು.

ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕೌಂಟರ್‌ ಮಾಡಲಾಗುತ್ತಿದೆ. ಅಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಪರಿಶೀಲನೆ ಮಾಡಲಿದ್ದಾರೆ. ಪಾಲಕರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇಲ್ಲ. ನಮಗೆ ಸಂಪೂರ್ಣ ಸಹಕಾರ ನೀಡಿದ್ದಲ್ಲಿ ಪರೀಕ್ಷೆಯನ್ನು ಯೋಗ್ಯ ರೀತಿಯಲ್ಲಿ ಮುಗಿಸಬಹುದು ಎಂದರು.

ಪರೀಕ್ಷಾ ಸಮಯದಲ್ಲಿ ಶಿಕ್ಷಕರು ಮೊಬೈಲ್‌ ಬಳಸುವುದು ಮತ್ತು ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಲ್ಲಿ 3 ಲಕ್ಷ ರೂ. ದಂಡ ಹಾಗೂ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಎಚ್ಚರದಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದರು. ಬಿಇಒ ಎಚ್‌.ಎಸ್‌. ನಗನೂರ ಮಾತನಾಡಿ, ಜೂ. 25ರಿಂದ ಪರೀಕ್ಷೆ ಆರಂಭವಾಗಲಿದ್ದು ತಾಲೂಕಿನಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 6,059 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು 1,100 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವಿತರಿಸಲಾಗುವುದು ಎಂದರು.

ತಹಶೀಲ್ದಾರ್‌ ಸಂಜೀವಕುಮಾರ ದಾಸರ, ಸಿಪಿಐ ಸತೀಶ ಕಾಂಬಳೆ ಮಾತನಾಡಿ, ಪರೀಕ್ಷೆಗೆ ಎಲ್ಲ ರೀತಿ ಸಿದ್ಧತೆಗಳು ನಡೆಯುತ್ತಿದ್ದು ಪಾಲಕರು ಭಯ ಪಡುವ ಅವಶ್ಯಕತೆ ಇಲ್ಲ ಎಂದರು. ದೇವರಹಿಪ್ಪರಗಿ ತಹಶೀಲ್ದಾರ್‌ ವೈ.ಡಿ. ನಾಗಠಾಣ, ತಾಪಂ ಅ ಧಿಕಾರಿ ಸುನೀಲ ಮದ್ದಿನ, ಸಂತೋಷ ಬೀಳಗಿ, ದೈಹಿಕ ಶಿಕ್ಷಣಾಧಿಕಾರಿ ಎ.ಎಂ. ಬಿರಾದಾರ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.