ಕ್ವಾರಂಟೈನ್ಲ್ಲಿದ್ದ ವ್ಯಕ್ತಿಗಳು ನಿಯಮ ಮೀರಿದರೆ ಕ್ರಮ: ಎಡಿಸಿ ಎಚ್ಚರಿಕೆ
Team Udayavani, Jun 20, 2020, 4:53 PM IST
ಹಾವೇರಿ: ಜಿಲ್ಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಕೆಲ ವ್ಯಕ್ತಿಗಳು ನಿಯಮ ಮೀರಿ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಿಯಮ ಮೀರಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಜೂ. 18ರಂದು ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಕುರಿತು ಜಿಲ್ಲಾ ಕೋವಿಡ್ ವಾರ್ ರೂಂನಿಂದ ಮಾಹಿತಿ ಬಂದಿದೆ. ಇಂಥ ವ್ಯಕ್ತಿಗಳ ಮೇಲೆ ಕೋವಿಡ್-19 ಆಕ್ಟ್ 2020, ಎಪಿಡಮಿಟಿಕ್ ಡಿಸಿಸ್ ಆಕ್ಟ್ 1897ರ ಅಡಿ ನಿಯಮಾನುಸಾರ ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ದಾಖಲಿಸಲು ಕೋರಲಾಗಿದೆ.
ಹೋಂ-ಕ್ವಾರಂಟೈನ್ ಹಾಗೂ ಇನ್ಸಿಟ್ಯೂಷನ್ ಕ್ವಾರಂಟೈನ್‌ಗೆ ಒಳಪಡಿಸಲಾದ ವ್ಯಕ್ತಿಗಳು ಕಡ್ಡಾಯವಾಗಿ ಕ್ವಾರಂಟೈನ್ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.