ಚಾರ್ಮಾಡಿ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಂ ಟಂ ವಾಹನ, ಪಾರಾದ ಚಾಲಕ
Team Udayavani, Jun 20, 2020, 5:43 PM IST
ಚಿಕ್ಕಮಗಳೂರು : ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ವಾಹನವೊಂದು ಪಾತಾಳಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಚಾರ್ಮಾಡಿ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟ್ ರಸ್ತೆ 5ನೇ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 50 ಅಡಿ ಪಾತಾಳಕ್ಕೆ ಟಂ ಟಂ ವಾಹನ ಉರುಳಿ ಬಿದ್ದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಅಲ್ಯೂಮಿನಿಯಂ ತಂತಿಯನ್ನು ಲೋಡ್ ಮಾಡಿಕೊಂಡು ತೆರಳುವ ವೇಳೆ ರಸ್ತೆಯ ಬದಿಗೆ ಜರುಗಿದ ವಾಹನ ನಿಯಂತ್ರಣ ತಪ್ಪಿ ಏಕಾಏಕಿ ಪಾತಾಳಕ್ಕೆ ಬಿದ್ದಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ವಾಹನ ತೆರುವು ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇನ್ನು ಮಳೆಗಾಲ ಆರಂಭವಾಯಿತೆಂದರೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ವಾಹನಗಳು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಸಾಮಾನ್ಯವಾಗಿದೆ. ಆದಷ್ಟು ಬೇಗ ಸರ್ಕಾರ ತಿರುವಿನಲ್ಲಿ ರಸ್ತೆಗಳ ಅಗಲೀಕರಣ ಸೇರಿದಂತೆ ಅಪಘಾತ ವಲಯಗಳಲ್ಲಿ ಚಾಲಕರಿಗೆ ಗೋಚರವಾಗುವಂತೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ವಾಹನ ಸವಾರರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.