ವಿದ್ಯಾರ್ಥಿಗಳೇ ಪರೀಕ್ಷೆಗೆ ಸಿದ್ಧರಾಗಿ
Team Udayavani, Jun 21, 2020, 5:04 AM IST
ಭಾರತೀನಗರ: ಕೋವಿಡ್ 19 ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆಗೆ ಸಿದ್ಧರಾಗಿ ಎಂದು ತಹಶೀಲ್ದಾರ್ ವಿಜಯಕುಮಾರ್ ತಿಳಿಸಿದರು. ಮದ್ದೂರು ತಾಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿ ಕಚೇರಿಯಿಂದ ನಡೆದ ಪ್ರೌಢ ಶಾಲೆ ಮುಖ್ಯ ಶಿಕ್ಷಕರ ಕಾರ್ಯಾಗಾರದಲ್ಲಿ ಮಾತನಾಡಿದರು.
ಸರ್ಕಾರ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡು ದಿನಾಂಕ ನಿಗದಿ ಮಾಡಿದ್ದು, ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಯಾವುದೇ ರೋಗ ಲಕ್ಷಣ ಕಂಡು ಬಂದರೆ ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸದೇ ಜಾಗೃತರಾಗಿ ಕರ್ತವ್ಯ ನಿರ್ವಾಹಿಸಬೇಕು ಎಂದು ಹೇಳಿದರು. ತಾಪಂ ಇಒ ಮುನಿರಾಜು ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ಗ್ರಾಪಂನಿಂದ ಔಷಧ ಸಿಂಪಡಿಸಿ, ಸ್ಯಾನಿಟೈಸರ್ ಮಾಡಲಾಗುವುದು. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಾಣಾಧಿಕಾರಿ ಬಿ.ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21260 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲಿದ್ದು, ಹೊರ ಜಿಲ್ಲೆಯಿಂದ 225 ಆಗಮಿಸಿದರೆ ನಮ್ಮ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ 134 ವಿದ್ಯಾರ್ಥಿಗಳು ತೆರಳಿ ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು. ಸಭೆ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಾಣಾಧಿಕಾರಿ ಮಹದೇವು ವಹಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್ ಕೋರೆ, ಶಿಕ್ಷಣಾಧಿಕಾರಿ ಶ್ರೀನಿವಾಸ್, ಸುಬ್ರಮಣ್ಯ, ಸತೀಶ್, ಮಹೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.