ಹೊರ ರಾಜ್ಯಗಳಿಂದ ಬಂದವರ ಮಾಹಿತಿ ಸಂಗ್ರಹಿಸಲು ಸೂಚನೆ
Team Udayavani, Jun 21, 2020, 6:57 AM IST
ಹಾಸನ: ಹೊರ ರಾಜ್ಯಗಳಿಂದ ಗ್ರಾಮಗಳಿಗೆ ಬಂದಿರುವವರ ಮನೆಗಳಿಗೆ ಗ್ರಾಮ ಲೆಕ್ಕಿಗರು ಹಾಗೂ ಪಿಡಿಒ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಸೂಪರ್ ಮಾರ್ಕೆಟ್ ಗಾರ್ಡ್‌ಗಳು, ಜನ ಸಂಪರ್ಕದಲ್ಲಿರುವ ಸಿಬ್ಬಂದಿ, ಕೊಳೆಗೇರಿ ಯಲ್ಲಿರುವವರು, ಕೊರಿಯರ್ ಹುಡುಗರು, ರಸ್ತೆ ಬದಿಯ ವ್ಯಾಪಾರಿಗಳು, ಬ್ಯೂಟಿ ಪಾರ್ಲರ್ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಯನ್ನು ಕೋಕೋವಿಡ್ 19 ಪರೀಕ್ಷೆಗೆ ಒಳಪಡಿಸಬೇಕು ಎಂದರು. ಕೋವಿಡ್ 19 ಸೇವೆಯಲ್ಲಿ ನಿರತರಾಗಿದ್ದ ಜಿಲ್ಲೆಯ 9 ಮಂದಿ ಪೊಲೀಸರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎಲ್ಲ ಪೊಲೀಸ್ ಇಲಾಖಾ ಸಿಬ್ಬಂದಿಗಳಿಗೆ ಮತ್ತು ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವ ಹಿಸುತ್ತಿರುವ ಸಿಬ್ಬಂದಿಗೆ ಕರೊನಾ ಪರೀಕ್ಷೆ ಮಾಡಿಸಿ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಗರದ ವ್ಯಾಪ್ತಿಯಲ್ಲಿರುವ ಸಮು ದಾಯ ಕ್ವಾರಂಟೈನ್ ಕೇಂದ್ರ ಹಾಗೂ ಎಲ್ಲ ತಾಲೂಕುಗಳ ಕ್ವಾರಂಟೈನ್ ಕೇಂದ್ರ ಗಳ ಸ್ವತ್ಛತೆ, ಸಮರ್ಪಕ ನೀರಿನ ಸೌಲಭ್ಯ ಹಾಗೂ ಸ್ಯಾನಿಟೈಸಿಂಗ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೇವಾ ಸಿಂಧು ಆ್ಯಪ್ ಮೂಲಕ ಹೊರ ರಾಜ್ಯಗಳಿಗೆ ಒಂದು ಬಾರಿ ಹೋಗಿ ಬಂದವರಿಗೆ ಕೊರೋನಾ ಕುರಿತು ಅರಿವು ಮೂಡಿಸಿ ಎರಡನೇ ಬಾರಿ ಹೋಗಿ ಬಂದವ ರನ್ನು ಕ್ವಾರಂಟೈನ್ ಮಾಡಿ ಹಾಗೂ ಮೂರನೇ ಬಾರಿ ಹೋಗಿ ಬಂದವರ ಮೇಲೆ ಎಫ್ ಐಆರ್ ದಾಖಲಿಸುವಂತೆ ಸೂಚನೆ ನೀಡಿದರು.
ಮಾಸ್ಕ್ ಧರಿಸದೇ ಓಡಾಡುವವರು ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಳ್ಳದವರಿಗೆ ದಂಡ ವಿಧಿಸಬೇಕು. ಸೋಂಕಿತ ರನ್ನು ಗುಣಪಡಿಸಲು ನೀಡುತ್ತಿರುವ ಔಷಧೋಪಚಾರ ಕುರಿತು ಮಾಹಿತಿ ಪಡೆದರು. ಡೀಸಿ ಆರ್. ಗಿರೀಶ್, ಎಡೀಸಿ ಕವಿತಾ ರಾಜಾರಾಂ, ಎ.ಸ್ಪಿ ಬಿ.ಎನ್ ನಂದಿನಿ, ಡಿಎಚ್‌ಒ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್, ಜಿಲ್ಲಾ ಶಸOಉ ಚಿಕಿತ್ಸಕ ಡಾ.ಕೃಷ್ಣಮೂರ್ತಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.