ಆಮೆಗತಿ ಕಾಮಗಾರಿಗೆ ಬೇಸರ
Team Udayavani, Jun 21, 2020, 12:47 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಭಾಗದಲ್ಲಿ ಅಂದಾಜು 16 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 100 ಹಾಸಿಗೆಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ಶನಿವಾರ ಪರಿಶೀಲಿಸಿದರು.
ಆಸ್ಪತ್ರೆಯ ಪಾರ್ಕಿಂಗ್ ಜಾಗ, ನೆಲ ಮಹಡಿಯಲ್ಲಿ ನಿರ್ಮಾಣ ವಾಗುತ್ತಿರುವ ಆಸ್ಪತ್ರೆಯ ವಿವಿಧ ಬ್ಲಾಕ್ ಗಳು ಸೇರಿದಂತೆ ಇನ್ನಿತರ ಕಾಮಗಾರಿ ಪರಿಶೀಲಿಸಿದ ಶಾಸಕರು ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಕ್ಷೇತ್ರದ ಬಡ ಜನರ ಆರೋಗ್ಯ ಸುರಕ್ಷತೆಗೆ ವಿಶೇಷ ಒತ್ತು ನೀಡಿ ಈ ಭಾಗದಲ್ಲಿ 100 ಹಾಸಿಗೆಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸುತ್ತಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾದ 7 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಆಸ್ಪತ್ರೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರು ಚಿಕಿತ್ಸೆಗಾಗಿ ಕಿಮ್ಸ್‌ಗೆ ಅಲೆದಾಡುವುದು ತಪ್ಪಲಿದೆ ಎಂದರು.
ಗುತ್ತಿಗೆದಾರರು ಅನಗತ್ಯ ವಿಳಂಬ ಮಾಡದೇ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಸಿದರು. ಪಾಲಿಕೆ ಇಇ ಚವ್ಹಾಣ, ಎಸ್.ಇ.ತಿಮ್ಮಪ್ಪ, ಬಸವರಾಜ ಲಮಾಣಿ, ಮುಖಂಡರಾದ ಪ್ರಭು ಪ್ರಭಾಕರ, ನಾಸಿರ ಅಸುಂಡಿ, ಇಮ್ರಾನ್ ಸಿದ್ದಿಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.