15 ಪಾಸಿಟಿವ್ ಪ್ರಕರಣ ದೃಢ
Team Udayavani, Jun 21, 2020, 12:08 PM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ 15 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಿಂದ ಶನಿವಾರ 338 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕೋವಿಡ್-19 ಫಲಿತಾಂಶಕ್ಕಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಶನಿವಾರ ಬಂದ ವರದಿಗಳಲ್ಲಿ 260 ನೆಗೆಟಿವ್ ಆಗಿವೆ. ಜಿಲ್ಲೆಯಿಂದ ಇದುವರೆಗೆ ಒಟ್ಟು 19,730 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 18,294 ವರದಿಗಳು ನೆಗೆಟಿವ್ ಆಗಿವೆ. ಉಳಿದ 1001 ಸ್ಯಾಂಪಲ್ ಗಳ ಫಲಿತಾಂಶ ಬರಬೇಕಿದೆ.
ಫೀವರ್ ಕ್ಲಿನಿಕ್‌ಗಳಲ್ಲಿ ಶನಿವಾರ 473 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 429 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದವರಲ್ಲಿ 238 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 74, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ 30, ಮಾನ್ವಿ ತಾಲೂಕು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 34 ಹಾಗೂ ಲಿಂಗಸುಗೂರು ತಾಲೂಕು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 42 ಸೇರಿದಂತೆ ಒಟ್ಟು 180 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಿಸಿ ನಿಗಾವಹಿಸಲಾಗಿದೆ. ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.