ಇಂಧನ ದರ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 21, 2020, 3:50 PM IST
ಬೆಳಗಾವಿ: ದೇಶದಲ್ಲಿ ಇಂಧನ ದರ ಏರಿಕೆ ಖಂಡಿಸಿ ಕಮ್ಯೂನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಂಧನ ದರ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಪೆಟ್ರೋಲ್ ಹಾಗೂ ಡಿಸೇಲ್ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿಕೆ ಆಗಿದೆ. ಆದರೆ ಸರ್ಕಾರ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಿಸುತ್ತಿರುವುದರಿಂದ ಜನರಿಗೆ ತೊಂದರೆ ಕೊಡುತ್ತಿದೆ ಎಂದು ದೂರಿದರು.
ಈಗಾಗಲೇ ಲಾಕ್‌ಡೌನ್‌ದಿಂದ ಜನರು ಬದುಕು ನಡೆಸುವುದು ಕಷ್ಟಕರವಾಗಿದೆ. ಇಂಥದರಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವುದು ಸರಿಯಲ್ಲ. ಕಳೆದ 10-12 ದಿನಗಳ ಅವ ಯಲ್ಲಿ ಇಂಧನ ದರ ಸುಮಾರು 7 ರೂ.ವರೆಗೆ ಹೆಚ್ಚಿಗೆ ಆಗಿದೆ. ಸರ್ಕಾರ ಈ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ 3 ಸಾವಿರ ರೂ. ಪರಿಹಾರ ಧನ ಘೋಷಿಸಿದೆ. ಕೋವಿಡ್ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರೂ ಹೆಗಲಿಗೆ ಹೆಗಲು ಕೊಟ್ಟು ಕೋವಿಡ್ ವಾರಿಯರ್ಸ್ ಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ನಾಗೇಶಿ ಸಾತೇರಿ, ಅನಿಲ ಅಜಗಾಂವಕರ, ಯಲ್ಲುಬಾಯಿ ಶೀಗಿಹಳ್ಳಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.