ದರೋಡೆ ಆರೋಪಿಗಳಿಗೆ ಸೋಂಕು- ಪೊಲೀಸರಿಗೆ ಕ್ವಾರಂಟೈನ್
Team Udayavani, Jun 21, 2020, 10:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಂಧಿತ ಮೂವರಲ್ಲಿ ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಪರಿಣಾಮ ಆರೋಪಿಗಳ ಸಂಪರ್ಕದಲ್ಲಿದ್ದ ಇಬ್ಬರು ಎಸ್‌ಐ ಹಾಗೂ 14 ಜನ ಪೊಲೀಸರನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಹೈದ್ರಾಬಾದ್ ನಿವಾಸಿ ದಂಪತಿಗೆ ಅಗ್ಗದ ದರಕ್ಕೆ ಚಿನ್ನ ಮಾರಾಟ ಮಾಡುವ ವಂಚನೆ ಪ್ರಕರಣದಲ್ಲಿ ಪೊಲೀಸರು ಜೂ. 17ರಂದು ಮೂವರನ್ನು ಬಂಧಿಸಿದ್ದು ಎಲ್ಲರನ್ನೂ ಸಿಂದಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ನಡೆಸಿ ಕೋವಿಡ್ ಸೋಂಕು ಪತ್ತೆಗಾಗಿ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಬಳಿಕ ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗ್ರಹಕ್ಕೆ ಕಳಿಸಲಾಗಿತ್ತು. ಇದರಲ್ಲಿ ಇಬ್ಬರು ಆರೋಪಿಗಳಲ್ಲಿ ಕೋವಿಡ್ ಸೋಂಕು ಇರುವುದು ಜೂ. 19ರಂದು ಪ್ರಕಟಗೊಂಡಿರುವ ಕೋವಿಡ್ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಜೈಲಿನಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದ್ದ ಬಂಧಿತ ಆರೋಪಿಗಳನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಮಧ್ಯೆ ಸದರಿ ಆರೋಪಿಗಳನ್ನು ಬಂಧಿಸುವುದು, ವಿಚಾರಣೆ ನಡೆಸುವುದು ಸೇರಿದಂತೆ ಸೋಂಕಿತ ಆರೋಪಿಗಳ ಸಂಪರ್ಕದಲ್ಲಿದ್ದ ಕಾರಣಕ್ಕೆ ಜಿಲ್ಲೆಯ ಇಬ್ಬರು ಪಿಎಸ್‌ಐ ಹಾಗೂ 14 ಸಿಬ್ಬಂದಿಗಳನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ 37 ಪೊಲೀಸರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.