ಮುಂದುವರಿದ ಕೋವಿಡ್ ಕಳವಳ: ರಾಜ್ಯದಲ್ಲಿಂದು 453 ಜನರಿಗೆ ಸೋಂಕು ದೃಢ
Team Udayavani, Jun 21, 2020, 6:43 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕಳವಳ ಮುಂದುವರಿದಿದೆ. ಇಂದು ಮತ್ತೆ 453 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 9150ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 225 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು 5618 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ರಾಜ್ಯದ ಒಟ್ಟು ಮೂರು ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರ ದಾಟಿದ. ಮೊದಲ ಸ್ಥಾನದಲ್ಲಿ ಬೆಂಗಳೂರು ನಗರ ಜಿಲ್ಲೆಯಿದ್ದರೆ (1272) , ಕಲಬುರಗಿ (1199) ಮತ್ತು ಉಡುಪಿ ಜಿಲ್ಲೆ(1063) ಗಳಲ್ಲಿ ಸಾವಿರಕ್ಕೂ ಹೆಚ್ಚಿನ ಸೋಂಕಿತರಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಂದು ಅತೀ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ನಗರದಲ್ಲಿ 196 ಜನರಿಗೆ ಸೋಂಕು ದೃಢವಾಗಿದ್ದರೆ, ಬಳ್ಳಾರಿ ಜಿಲ್ಲೆಯಲ್ಲಿ 40 ಜನರಿಗೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತಲಾ 39 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಮೈಸೂರು ಮತ್ತು ಗದಗದಲ್ಲಿ ತಲಾ 18 ಜನರಿಗೆ ಸೋಂಕು ದೃಢವಾಗಿದ್ದರೆ ಧಾರವಾಡದಲ್ಲಿ 15, ಬಾಗಲಕೋಟೆಯಲ್ಲಿ 14, ಬೀದರ್ ನಲ್ಲಿ 13, ದಾವಣಗೆರೆ, ಉತ್ತರ ಕನ್ನಡ ಮತ್ತು ಕೋಲಾರದಲ್ಲಿ ತಲಾ ಎಂಟು ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ.
ದ.ಕನ್ನಡ ಜಿಲ್ಲೆಯಲ್ಲಿ ಏಳು ಮಂದಿಗೆ ಸೋಂಕು ತಾಗಿದ್ದರೆ, ಮಂಡ್ಯ ಮತ್ತು ಹಾಸನದಲ್ಲಿ ಐವರಿಗೆ, ತುಮಕೂರಿನಲ್ಲಿ ನಾಲ್ಕು ಮಂದಿಗೆ ಸೋಂಕು ದೃಢವಾಗಿದೆ. ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಹಾವೇರಿಯಲ್ಲಿ ತಲಾ ಮೂವರಿಗೆ ಸೋಂಕು ದೃಢವಾಗಿದೆ. ರಾಯಚೂರು, ಶಿವಮೊಗ್ಗ, ರಾಮನಗರದಲ್ಲಿ ತಲಾ ಇಬ್ಬರಿಗೆ ಸೋಂಕು ದೃಢವಾಗಿದೆ. ಚಿಕ್ಕಮಗಳೂರಿನಲ್ಲಿ ಒಬ್ಬರಿಗೆ ಸೋಂಕು ತಾಗಿರುವುದು ಪತ್ತೆಯಾಗಿದೆ.
ರಾಜ್ಯದಲ್ಲಿ ಇಂದು ಸೋಂಕಿನಿಂದ ಐವರು ಸಾವನ್ನಪ್ಪಿದ್ದಾರೆ. ಇದರಿಂದ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.