ಆರೋಗ್ಯ ಕಾರ್ಯಕರ್ತರ ವಿಮೆ ವಿಸ್ತರಣೆ
Team Udayavani, Jun 22, 2020, 5:50 AM IST
ಹೊಸದಿಲ್ಲಿ: ದೇಶಾದ್ಯಂತ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಜಾರಿಗೊಳಿಸಲಾಗಿರುವ 50 ಲಕ್ಷ ರೂ.ಗಳ ವಿಮೆ ಯೋಜನೆಯನ್ನು ಕೇಂದ್ರ ಸರಕಾರ ಸೆಪ್ಟಂಬರ್ ವರೆಗೆ ವಿಸ್ತರಿಸಿದೆ.
22.12 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್ ವಿಮೆ ಕಂಪೆನಿ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆ ಜೂ.30ಕ್ಕೆ ಮುಕ್ತಾಯ ವಾಗಲಿತ್ತು. 2020ರ ಮಾ.30ರಿಂದ ಯೋಜನೆ ಜಾರಿಯಾಗಿತ್ತು.
ಕೋವಿಡ್-19 ಪೀಡಿತರ ಆರೈಕೆಯಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರಿಗಾಗಿ ಈ ಯೋಜನೆ ಆರಂಭಿಸಲಾಗಿದ್ದು, ವೈದ್ಯರು, ನರ್ಸ್‌ಗಳು, ವೈದ್ಯ ಸಹಾಯಕರು, ನೈರ್ಮಲ್ಯ ಕಾರ್ಮಿಕರ ಸಹಿತ ಸರಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳ ಆರೋಗ್ಯ ಕಾರ್ಯಕರ್ತರು ಯೋಜನೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.