2ನೇ ವರದಿ ಬರುವವರೆಗೂ ಮನೆಗೆ ಕಳಿಸಲ್ಲ: ಜಿಲ್ಲಾಧಿಕಾರಿ
Team Udayavani, Jun 22, 2020, 1:54 PM IST
ಕಾರವಾರ: ಕ್ವಾರಂಟೈನ್‌ನಲ್ಲಿದ್ದವರ ಎರಡನೇ ಬಾರಿಯ ಗಂಟಲು ದ್ರವದ ಕೋವಿಡ್-19 ಪರೀಕ್ಷಾ ವರದಿ ಬರುವವರೆಗೂ ಅವರನ್ನು ಮನೆಗೆ ಕಳುಹಿಸುವುದಿಲ್ಲ. ಈ ಬಗ್ಗೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿ ಹರೀಶ್ ಕುಮಾರ್ ತಿಳಿಸಿದ್ದಾರೆ.
ಪ್ರಯೋಗಾಲಯದ ವರದಿಗಳಲ್ಲಿ ಮೊದಲ ವರದಿಯಲ್ಲಿ ನೆಗೆಟಿವ್ ಬಂದು, ಎರಡನೇ ವರದಿಗೆ ಕೆಲವರದ್ದು ಪಾಸಿಟಿವ್ ಬರುತ್ತಿದೆ. ಹೀಗಾಗಿ ಹೋಮ್ ಕ್ವಾರಂಟೈನ್‌ಗೆ ತೆರಳಿದ ಕೆಲವರು ತಮ್ಮದು ನೆಗೆಟಿವ್ ಬಂದಿದೆ ಎಂದು ಕ್ವಾರಂಟೈನ್ ನಿಯಮ ಪಾಲನೆ ಮಾಡದೆ ಅಸಡ್ಡೆ ತೋರುತ್ತಿದ್ದಾರೆ. ಜತೆಗೆ ಎರಡನೇ ವರದಿ ಬರುವವರೆಗೆ ಆತ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಬಂದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಎರಡನೇ ವರದಿ ಬರುವವರೆಗೂ ಇನ್ನುಮುಂದೆ ಯಾರನ್ನೂ ಹೋಮ್ ಕ್ವಾರಂಟೈನ್‌ಗೆ ಕಳುಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಸದ್ಯ ಸ್ಥಳೀಯವಾಗಿ ಯಾರಲ್ಲೂ ಕೋವಿಡ್-19 ಪತ್ತೆಯಾಗುತ್ತಿಲ್ಲ. ಆದರೆ, ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ವಾಪಸ್ಸಾದವರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಹೊರ ರಾಜ್ಯಗಳಿಂದ ಬಂದವರಿಗೆ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ಸಾಂಸ್ಥಿಕ ಕ್ವಾರಂಟೈನ್ ಮುಗಿದ ಬಳಿಕ ಹೋಮ್ ಕ್ವಾರಂಟೈನ್ ವಿಧಿಸಲಾಗುತ್ತಿದೆ. ಆದರೆ, ಈ ನಡುವೆ ಹೋಮ್ ಕ್ವಾರಂಟೈನ್ ಕಡ್ಡಾಯ ಪಾಲನೆ ಮಾಡುವಂತೆ ನೋಡಿಕೊಳ್ಳುವುದು ಸ್ವಲ್ಪ ಕಷ್ಟದ ಕೆಲಸವೇ ಆಗಿದೆ. ಹೀಗಾಗಿ ಕ್ವಾರಂಟೈನ್‌ಗೆ ಬಂದ ನಂತರದ ಮೊದಲ ಅಥವಾ ಮೂರು ದಿನಗಳಲ್ಲಿ ಗಂಟಲು ದ್ರವ ಪಡೆದು ಪರೀಕ್ಷೆ ನಡೆಸಿದಾಗ ಅನೇಕರದ್ದು ನೆಗೆಟಿವ್ ಬರುತ್ತಿದ್ದು, ಕ್ವಾರಂಟೈನ್ ಪೂರ್ಣಗೊಳಿಸಿ ಹೋಮ್ ಕ್ವಾರಂಟೈನ್ ವಿಧಿಸಿದ ಬಳಿಕ ಪಾಸಿಟಿವ್ ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜೊತೆಗೆ, ಓರ್ವ ಸೋಂಕಿತನಿಂದಾಗಿ ಮನೆ ಮಂದಿಯೆಲ್ಲ ಸೋಂಕಿತರಾಗುವಂತಾಗುತ್ತಿದೆ. ಈ ಬಗ್ಗೆ ಈಗ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.