ಸರ್ಕಾರದ ನಿರ್ದೇಶನ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ
Team Udayavani, Jun 22, 2020, 4:37 PM IST
ರಾಯಬಾಗ: ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಹಂತದ ಅಧಿಕಾರಿಗಳು ಇಲಾಖೆ ಸೂಚಿಸಿದ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಎಸ್ ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಮಾಡಬೇಕೆಂದು ಬಿಇಒ ಎಚ್.ಎ.ಭಜಂತ್ರಿ ಹೇಳಿದರು.
ಪಟ್ಟಣದ ಬಿಇಒ ಕಚೇರಿ ಸಭಾಭವನದಲ್ಲಿ ನಡೆದ ಪರೀಕ್ಷಾ ಕೇಂದ್ರಗಳ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ, ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷಾ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಬೇಕು. ವಿದ್ಯಾರ್ಥಿಗಳು ಸ್ಯಾನಿಟೈಜರ್, ಕುಡಿಯುವ ನೀರಿನ ಬಾಟಲ್, ಟಿಫನ್ ಹಾಗೂ ಕಡ್ಡಾಯವಾಗಿ ಛತ್ರಿ ತರಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಬೇಕೆಂದು ಸೂಚಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಾಟೀಲ ಕೋವಿಡ್-19 ಹರಡದಂತೆ ಮುನ್ನಚ್ಚರಿಕೆ ಕ್ರಮಗಳ ಮಾಹಿತಿ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಮ್. ಮಾಳಿ, ಕ.ಪ್ರೌ.ಶಾ.ಸ.ಶಿ. ಸಂಘದ ಜಿಲ್ಲಾ ಕಾರ್ಯದರ್ಶಿ ಜೆ.ಎ.ನಿಲಜಗಿ, ಎಸ್.ಆರ್. ಕಂಬಾರ, ಎಚ್.ಬಿ.ಬೆನ್ನಾಡೆ, ಪಿ.ಎಸ್. ಶಾರಬಿದ್ರೆ ಹಾಗೂ ಪರೀಕ್ಷಾ ಕೇಂದ್ರಗಳ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.