ಮನೆಯಲ್ಲೇ ಯೋಗ ದಿನಾಚರಣೆ
Team Udayavani, Jun 22, 2020, 2:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ರವಿವಾರ ಮನೆಯಲ್ಲಿಯೇ ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸಿದರು.
ಪ್ರಸ್ತುತ ಕೋವಿಡ್-19 ಕಾರಣದಿಂದ ಸಾರ್ವಜನಿಕ ಸಭೆ, ಸಮಾರಂಭಗಳು, ಮತ್ತಿತರ ಕಾರ್ಯಕ್ರಮಗಳ ಆಯೋಜನೆ ನಿಷೇಧಿಸಿದ್ದರಿಂಧ “ಯೋಗ ಆ್ಯಟ್ ಹೋಮ್, ಯೋಗ ವಿಥ್ ಫ್ಯಾಮಿಲಿ’ ಎಂಬ ಘೋಷವಾಕ್ಯದೊಂದಿಗೆ ಸಾರ್ವಜನಿಕರು ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸೂಚಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸಹ ಮನೆಯಲ್ಲಿಯೇ ಯೋಗಾಸನ ಮಾಡಿದರು.
ಸರಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನದಂತೆ ಮನೆಯಲ್ಲಿಯೇ ಯೋಗ ಮಾಡಿದರು. ಎಲ್ಲ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕೂಡಾ ಮನೆಯಲ್ಲಿಯೇ ಯೋಗ ಮಾಡಿ, ಇಲಾಖೆಯಿಂದ ಯ್ಯೂಟೂಬ್ ಮೂಲಕ ನಡೆದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು ಎಂದು ತಿಳಿಸಿದ್ದಾರೆ.
ಪತಂಜಲಿ ಯೋಗ ಸಮಿತಿ: ವಿಶ್ವ ಯೋಗ ದಿನಚರಣೆ ಅಂಗವಾಗಿ ನಗರದಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿಯಿಂದ ಯೋಗ ಮಾಡಲಾಯಿತು. ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು. ರವಿವಾರ ಬೆಳಿಗ್ಗೆ ಸಾಮಾಜಿಕ ಅಂತರ ಕಾಪಾಡಿ ಶಿಬಿರಾರ್ಥಿಗಳಿಗೆ ಯೋಗ ಕಲೆಗಳನ್ನು ಹೇಳಿ ಕೊಡಲಾಯಿತು. ಯೋಗ ಪಟು ಸೋಮನಾಥ ಕೋಡ್ಲಾ ಯೋಗಗಳನ್ನು ಕಲಿಸಿದರೆ, ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಅನಿಲ ಗುರೂಜಿ ಯೋಗದ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.