ವಿಜ್ಞಾನ ಭವನದಲ್ಲಿ ಗ್ರಹಣ ವೀಕ್ಷಣೆ

ಮೌಡ್ಯ ನಿವಾರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ  ವಿವಿಧ ಉಪಕರಣ ಸೌಲಭ್ಯ

Team Udayavani, Jun 22, 2020, 4:45 PM IST

22-June-18

ಜಿಲ್ಲಾ ಕ್ರೀಡಾಂಗಣ ಬಳಿಯ ಉಪ ಪ್ರಾದೇಶಿಕ ವಿಜ್ಞಾನ ಭವನದಲ್ಲಿ ಸೂರ್ಯಗ್ರಹಣ ಕಂಡಿದ್ದು ಹೀಗೆ

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕಂಕಣ ಸೂರ್ಯಗ್ರಹಣವನ್ನು ವಿವಿಧ ಸಾಧನಗಳಿಂದ ಸಾರ್ವಜನಿಕರ ವೀಕ್ಷಣೆಗೆ ಭಾನುವಾರ ಅವಕಾಶ ಕಲ್ಪಿಸಲಾಯಿತು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋ ಸೊಸೈಟಿಯಿಂದ ಸೂರ್ಯಗ್ರಹಣ ವೀಕ್ಷಣೆ ಆಯೋಜಿಸಲಾಗಿತ್ತು. ವಿಜ್ಞಾನ ಕೇಂದ್ರದಲ್ಲಿ ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಟೆಲಿಸ್ಕೋಪ್‌, ಸುರಕ್ಷಕ ಕನ್ನಡಕಗಳು, ಪಿನ್‌ ಹೋಲ್‌ ಕ್ಯಾಮರಾ ಹಾಗೂ ಬಾಲ್‌ ಮಿರರ್‌ಗಳ ಮೂಲಕ ಸೂರ್ಯಗ್ರಹಣ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು, ಶಿಕ್ಷಕರು, ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಯಿತು.

ಭಾನುವಾರ ಬೆಳಗ್ಗೆ 10.04 ರಿಂದ ಆರಂಭವಾದ ಸೂರ್ಯಗ್ರಹಣ ಮಧ್ಯಾಹ್ನ 1:34 ರವರೆಗೆ ಗೋಚರಿಸಿತು. ಸೂರ್ಯ-ಭೂಮಿ ಮತ್ತು ಚಂದ್ರನ ನಡುವೆ ನಡೆಯುವ ಪ್ರತಿ ಸೂರ್ಯಗ್ರಹಣಗಳು ಪ್ರತಿ 173 ದಿನಗಳಿಗೆ ಒಮ್ಮೆ ನಡೆಯುತ್ತದೆ. ವಿಜ್ಞಾನದಲ್ಲಿ ಇದೊಂದು ಕುತೂಹಲಕಾರಿ ಘಟನೆ. ಇದರಲ್ಲಿ ಯಾವುದೇ ಮೌಡ್ಯತೆ ಅಡಗಿಲ್ಲ ಎಂದು ಕೇಂದ್ರದ ಸಹಾಯಕ ಶಿಕ್ಷಕಿ ಸುಮಯ್ಯ ಹೇಳಿದರು.

ಉಪಹಾರ ವ್ಯವಸ್ಥೆ: ಸೂರ್ಯಗ್ರಹಣದಿಂದ ಊಟ ಮಾಡಬಾರದು, ಗರ್ಭಿಣಿಯರು, ಮಕ್ಕಳು ಹೊರಗೆ ಬರಬಾರದು, ಆಹಾರ ವಿಷಕಾರಿಯಾಗುತ್ತದೆ ಎಂದು ಜನರಲ್ಲಿ ಅಡಗಿರುವ ಮೂಢ ನಂಬಿಕೆಗಳನ್ನು ಹೊಗಲಾಡಿಸುವ ಸಲುವಾಗಿ ವಿಜ್ಞಾನ ಕೇಂದ್ರದಲ್ಲಿ ಗ್ರಹಣ ವೀಕ್ಷಣೆಗೆ ಬಂದ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಗ್ರಹಣ ಎಂಬುದು ಆಕಾಶದಲ್ಲಿ ನಡೆಯುವ ಸೂರ್ಯ-ಭೂಮಿ ನಡುವೆ ಚಂದ್ರನ ಆಗಮನದಿಂದ ನೆರಳು, ಬೆಳಕಿನ ಕ್ರಿಯೆಗೆ ಗ್ರಹಣ ಎಂದು ಕೇಂದ್ರದ ವ್ಯವಸ್ಥಾಪಕ ಜಿ.ವಿ. ಶಿವರಾಜ್‌ ಹೇಳಿದರು. ಕಲ್ಯಾಣ ಮಠದ ಕಲ್ಯಾಣಸ್ವಾಮಿ, ಸದ್ದಾಂ, ಲಕ್ಷ್ಮಣ, ರವಿಕುಮಾರ್‌ ಮತ್ತಿತರರಿದ್ದರು.

ದೇವಸ್ಥಾನಗಳಲ್ಲಿ ವಿಶೇಷ ಪೂಜೆ: ಸೂರ್ಯಗ್ರಹಣದ ನಿಮಿತ್ತ ಜಿಲ್ಲೆಯ ನಾನಾ ದೇವಸ್ಥಾನಗಳಲ್ಲಿ ಗ್ರಹಣ ಸಮಯದಲ್ಲಿ ಪೂಜೆ ಪುನಸ್ಕಾರ ಸ್ಥಗಿತಗೊಳಿಸಿ, ಗ್ರಹಣ ಮುಗಿದ ನಂತರ ದೇವಸ್ಥಾನ ಶುದ್ದೀಕರಿಸಿ ಪೂಜೆ ನಡೆಸಲಾಯಿತು. ನಗರದ ಕೋಟೆ ಮಲ್ಲೇಶ್ವರ ದೇವಸ್ಥಾನ, ಹಡಗಲಿ ಮೈಲಾರ ದೇವಸ್ಥಾನ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನ, ಕುರುಗೋಡು ದೊಡ್ಡ ಬಸವೇಶ್ವರ, ಬುಕ್ಕಸಾಹರ ನಾಗಪ್ಪ ದೇವಸ್ಥಾನ ಸೇರಿ ನಾನಾ ದೇವಸ್ಥಾನಗಳಲ್ಲಿ ಬೆಳಗ್ಗೆ 8 ಗಂಟೆಗೆ ದೇವಸ್ಥಾನಗಳ ಬಾಗಿಲು ಮುಚ್ಚಿ, ಗ್ರಹಣ ಮುಗಿದ ಬಳಿಕ ಸಂಜೆ 4 ಗಂಟೆಯಿಂದ ದೇವಸ್ಥಾನ ಶುದ್ಧೀಕರಿಸಿ ವಿಶೇಷ ಪೂಜೆ ಮಾಡಲಾಯಿತು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.