ಯೋಗ ಜೀವನದ ಭಾಗವಾಗಲಿ: ಡಾ| ನಿರ್ಮಲ
Team Udayavani, Jun 22, 2020, 5:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಳಂದ: ಯೋಗ ಜೀವನದ ಒಂದು ಭಾಗವಾಗಲಿ. ಇದನ್ನು ಒಂದೇ ದಿನಕ್ಕೆ ನಿರ್ಭಂದಿಸದೇ, ದಿನನಿತ್ಯವೂ ಅರ್ಧ ಘಂಟೆ ರೂಢಿಗತ ಮಾಡಿಕೊಳ್ಳುವುದರಿಂದ ದೇಹವನ್ನು ಪುನಃಶ್ವೇತನಗೊಳಿಸಬಹುದು ಎಂದು ಕಲಬುರಗಿ ಹಿಂಗುಲಾಂಬಿಕಾ ಆರ್ಯುರ್ವೇದ ಕಾಲೇಜಿನ ಡಾ| ನಿರ್ಮಲಾ ಕೆಳಮನಿ ಹೇಳಿದರು.
ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯ ಆವರಣದಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯ, ಆಯುಷ್ಯ ಇಲಾಖೆ ಆಶ್ರಯದಲ್ಲಿ ಯುಜಿಸಿ ಹೊರಡಿಸಿದ ಮಾರ್ಗಸೂಚಿಗಳಂತೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯೋಗವು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೂಲಕ ಅಂತರಿಕ ಮತ್ತು ಬಾಹ್ಯ ದೇಹದ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕೋವಿಡ್-19 ಸಾಂಕ್ರಮಿಕ ರೋಗದ ಕಠಿಣ ಸಮಯದಲ್ಲಿ ಯೋಗದ ಪ್ರಾಮುಖ್ಯತೆಯನ್ನು ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದರು.
ವಿವಿ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಮಾತನಾಡಿ, ದೈನಂದಿನ ಜೀವನದಲ್ಲಿ ಯೋಗ ಅವಶ್ಯಕ ಎಂದರು. ಕುಲಸಚಿವ ಪ್ರೊ| ಮುಸ್ತಾಕ್ ಅಹ್ಮದ್ ಪಟೇಲ್, ಪರೀಕ್ಷಾ ನಿಯಂತ್ರಣ ಅಧಿಕಾರಿ ಪ್ರೊ| ಬಿ.ಆರ್. ಕೆರೂರ, ಹಣಕಾಸು ಅಧಿ ಕಾರಿ ಶಿವಾನಂದಂ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ| ಚನ್ನವೀರ ಆರ್.ಎಂ. ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು. ಕಲಬುರಗಿ ವಶಿಷ್ಠ ಯೋಗ ಕೇಂದ್ರದ ಸಿದ್ಧಯ್ಯ ಗುತ್ತೇದಾರ, ಶಶಿಕಲಾ ಗುತ್ತೇದಾರ ಯೋಗಾಸನ ಪ್ರದರ್ಶನ ಮಾಡಿದರು. ಡಾ| ಮಹೇಂದ್ರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.