ಬೌದ್ಧ ಧರ್ಮದ ಅವಶೇಷಗಳನ್ನು ರಕ್ಷಿಸಿ
Team Udayavani, Jun 23, 2020, 5:00 AM IST
ಯಳಂದೂರು: ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ರಾಮಮಂದಿರದ ಜಾಗದಲ್ಲಿ ದೊರೆತಿರುವ ಬೌದ್ಧ ಧರ್ಮದ ಕುರುಹುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ದಸಂಸ ಜಿಲ್ಲಾ ಸಂಚಾಲಕ ರಾಜಣ್ಣ ಮಾತನಾಡಿದರು.
ಸರ್ವೋಚ್ಚ ನ್ಯಾಯಾಲಯ ಬಾಬರಿ ಮಸೀದಿ- ರಾಮಮಂದಿರ ವಿವಾದ ಬಗೆಹರಿಸಿ, ಅಲ್ಲಿ ರಾಮ ಮಂದಿರ ನಿರ್ಮಿಸಲು ತೀರ್ಪು ನೀಡಿತ್ತು. ಈ ನಿಟ್ಟಿನಲ್ಲಿ ರಾಮಮಂದಿರ ನಿರ್ಮಾಣದ ವೇಳೆ ಆ ಸ್ಥಳದಲ್ಲಿ ಬೌದ್ಧ ಧರ್ಮದ ಅವಶೇಷಗಳು, ಕಲಾಕೃತಿಗಳು, ಕುರುಹುಗಳು ದೊರೆತಿವೆ. ಇದರಿಂದ ಇಲ್ಲಿ ಬೌದ್ಧವಿಹಾರ ಇತ್ತು ಎಂಬುದು ಸ್ಪಷ್ಟವಾಗುತ್ತದೆ. ಹಾಗಾಗಿ ಅವುಗಳನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಿದರು.
ದಸಂಸ ಕಂದಹಳ್ಳಿ ನಾರಾಯಣ ಮಾತನಾಡಿ, ರಾಮಮಂದಿರ ನಿರ್ಮಿಸುವ ಸ್ಥಳವನ್ನು ಮತ್ತೂಮ್ಮೆ ಉತನನ ನಡೆಸಬೇಕು. ರಾಮಮಂದಿರ ನಿರ್ಮಾಣ ಮಾಡುತ್ತಿ ರುವ ಟ್ರಸ್ಟ್ ಕಾರ್ಯದರ್ಶಿ ಚಂಪತ್‌ರಾಯ್ ಹಾಗೂ ಇದಕ್ಕೆ ಅನುಕೂಲ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಕಾನೂನು ಕ್ರಮ ವಹಿಸಬೇಕು ಎಂದರು. ಪ್ರತಿಭಟನೆಯಲ್ಲಿ ರಾಮಪುರ ರಂಗಸ್ವಾಮಿ, ಮದ್ದೂರು ಚಕ್ರವರ್ತಿ, ಹೊನ್ನೂರು ರೇವಣ್ಣ, ಚಂದ್ರು, ರಾಜಣ್ಣ, ನಂಜುಂಡ ಸ್ವಾಮಿ, ಮಂಜು, ನಾರಾಯಣಸ್ವಾಮಿ, ನಿಂಗರಾಜು, ಕುಮಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.