ಚಾಮರಾಜನಗರ ಜಿಲ್ಲೆ: ಇಬ್ಬರಿಗೆ ಸೋಂಕು
Team Udayavani, Jun 23, 2020, 5:02 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 2 ಕೋವಿಡ್ ಪ್ರಕರಣ ವರದಿಯಾಗಿದೆ. ನಗರದ ತಾಲೂಕು ಕಚೇರಿಯಲ್ಲಿ ಭೂ ಮಾಪಕರಾಗಿರುವ 36 ವರ್ಷದ ಮಹಿಳೆ ಹಾಗೂ ಗುಂಡ್ಲುಪೇಟೆಯ ಇನ್ನೋರ್ವ ಚಾಲಕನಿಗೆ ಕೋವಿಡ್ ದೃಢಪಟ್ಟಿದೆ. ಈ ಎರಡು ಪ್ರಕರಣಗಳ ಬಳಿಕ ಈಗ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್ ಸೋಂಕು ತಗುಲಿದ್ದು, ಅವರಲ್ಲಿ ಮುಂಬೈ ನಿವಾಸಿ ಗುಣಮುಖನಾಗಿ ಮನೆಗೆ ತೆರಳಿದ್ದಾನೆ.
ಮೂರು ಸಕ್ರಿಯ ಪ್ರಕರಣಗಳಿವೆ. ಮಹಿಳೆ ನಗರದ ಭಗೀರಥ ನಗರ ಹೊಸ ಬಡಾವಣೆ ನಿವಾಸಿಯಾಗಿದ್ದು, ಆ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಿ ಸೀಲ್‌ಡೌನ್ ಮಾಡ ಲಾಗಿದೆ. ಆ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಜನರ ಓಡಾಟ ನಿರ್ಬಂಧಿಸಲಾಗಿದೆ. ತಾಲೂಕು ಕಚೇರಿಯನ್ನು ಸ್ಯಾನಿಟೈಸ್ ಮಾಡಿ, ಮಹಿಳೆ ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಗೆ ಬೀಗ ಹಾಕಲಾಗಿದೆ. ಸೋಂಕು ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿಲ್ಲ.
ಆದರೆ, ಆ ಮಹಿಳೆಯನ್ನು ಸೋಮವಾರ ಸಂಜೆ ತಾಲೂಕು ಕಚೇರಿಯಿಂದ ಆ್ಯಂಬುಲೆನ್ಸ್ ಮೂಲಕ ನಗರದ ಕೋವಿಡ್ ಆಸ್ಪತ್ರೆಗೆ ಕರೆ ತರಲಾಗಿದೆ. ತಾಲೂಕು ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಈ ಮಹಿಳೆಗೆ ವಾರದ ಹಿಂದೆ ಜ್ವರ, ತಲೆನೋವು ಕಾಣಿಸಿಕೊಂಡಿದ್ದು, ಖಾಸಗಿ ವೈದ್ಯರಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ನಗರದ ಫೀವರ್ ಕ್ಲಿನಿಕ್‌ನಲ್ಲಿ ರ್‍ಯಾಂಡಮ್ ಟೆಸ್ಟ್ ಮಾಡಿಸಿಕೊಂಡಿದ್ದರು. ಅದರ ಫಲಿತಾಂಶ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.
ಚಾಲಕನಿಗೆ ಸೋಂಕು: ಗುಂಡ್ಲುಪೇಟೆಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಸರಕು ಸಾಗಣೆ ವಾಹನದ ಚಾಲಕನಿಗೆ ಸೋಂಕು ತಗುಲಿರುವುದು ಸೋಮವಾರ ದೃಢ ಪಟ್ಟಿದೆ. ಈತ ಈ ಮುಂಚೆ ಸೋಂಕಿಗೊಳಗಾಗಿದ್ದ ಚಾಲಕನ ಸಹವರ್ತಿಯಾಗಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.