ಶೀಘ್ರ 155 ವೈದ್ಯರ ನೇಮಕ
Team Udayavani, Jun 23, 2020, 6:29 AM IST
ಬೆಳಗಾವಿ: ರಾಜ್ಯದಲ್ಲಿರುವ ಕಾರ್ಮಿಕ ಆಸ್ಪತ್ರೆಗಳಲ್ಲಿ ಸುಮಾರು 277 ವೈದ್ಯರ ಕೊರತೆ ಇದೆ. ಈ ಸಮಸ್ಯೆಯನ್ನು ನೀಗಿಸಲು ಶೀಘ್ರದಲ್ಲಿಯೇ 155 ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ್ ಹೆಬ್ಟಾರ್ ಹೇಳಿದರು.
ಇಲ್ಲಿನ ಅಶೋಕ ನಗರದಲ್ಲಿರುವ ಇ.ಎಸ್.ಐ. ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕಾರ್ಮಿಕ ಆಸ್ಪತ್ರೆಯಲ್ಲಿ ಒಟ್ಟು 590 ವೈದ್ಯರ ಹುದ್ದೆಗಳಿದ್ದು, 313 ಜನ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
ಈಗಾಗಲೇ ಕೆ.ಪಿ.ಎಸ್.ಸಿ. ಮೂಲಕ 155 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳ ಪ್ರಮಾಣ ಪತ್ರ, ಸಿಂಧುತ್ವ ಹಾಗೂ ದಾಖಲಾತಿಗಳ ಪರಿಶೀಲನೆ ಹಂತದಲ್ಲಿ ಇದೆ. ಬರುವ 10 ರಿಂದ 15 ದಿನಗಳಲ್ಲಿ ಅವರಿಗೆ ನೇಮಕಾತಿ ಆದೇಶ ನೀಡಲಾಗುತ್ತದೆ. ವೈದ್ಯರ ಕೊರತೆ ಇರುವ ಕಡೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ಹೇಳಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಸ್ವತ್ಛತೆಗೆ, ರೋಗಿಗಳ ಆರೈಕೆ ಮತ್ತು ಸುರಕ್ಷತೆಗೆ ಅನುವು ಮಾಡಿಕೊಡಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳಿಗೆ ಕೊರತೆ ಇಲ್ಲ. ರಾಜ್ಯದಲ್ಲಿ ಈಗಾಗಲೇ ಒಂದು ವರ್ಷಕ್ಕೆ 600 ಕೋಟಿ ರೂ.ಗಳ ಔಷಧಿಗಳನ್ನು ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕಾರ್ಮಿಕ ಇಲಾಖೆಯಲ್ಲಿ 22 ಲಕ್ಷ ಜನ ಕಟ್ಟಡ ಕಾರ್ಮಿಕರಿದ್ದು, ಅದರಲ್ಲಿ 14 ಲಕ್ಷ ಜನರಿಗೆ ಐದು ಸಾವಿರ ಪರಿಹಾರ ಧನ ತಲುಪಿದೆ. ಕಟ್ಟಡ ಕಾರ್ಮಿಕರನ್ನು ಹೊರತುಪಡಿಸಿದರೆ, ಮನೆ ಕೆಲಸದವರು, ಅಗಸರು, ಕ್ಷೌರಿಕ, ವಾದ್ಯ, ಟೇಲರ್ ವೃತ್ತಿಯವರ ದಾಖಲಾತಿಗಳು ಸರ್ಕಾರದ ಬಳಿ ಲಭ್ಯವಿಲ್ಲ ಎಂದರು. ರಾಜ್ಯದ ಕಾರ್ಮಿಕ ಇಲಾಖೆಯಲ್ಲಿ ಒಟ್ಟು ಮೂರು ಒಕ್ಕೂಟಗಳಿವೆ. ಕಟ್ಟಡ ಕಾರ್ಮಿಕರ ಒಕ್ಕೂಟ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟಗಳು ಸಕ್ರಿಯವಾಗಿವೆ. ಕೇರಳದಲ್ಲಿ 26, ಚೆನೈನಲ್ಲಿ 19 ಒಕ್ಕೂಟಗಳಿವೆ ಎಂದು ಸಚಿವರು ಹೇಳಿದರು.
ಕಾರ್ಮಿಕ ಇಲಾಖೆಯಿಂದ ಒಂದು ಸಾವಿರ ಕೋಟಿ ರೂ. ಪರಿಹಾರಧನ ನೀಡಬೇಕಾಗಿತ್ತು. ಅದರಲ್ಲಿ ಈಗಾಗಲೇ 711 ಕೋಟಿ ಪರಿಹಾರಧನ ನೀಡಲಾಗಿದೆ. ಇಲಾಖೆಯ ನಿಯಮಾವಳಿ ಪ್ರಕಾರ ಕಾರ್ಮಿಕರು ಜಾಬ್ ಕಾರ್ಡ್‌ಗಳನ್ನು ನವೀಕರಣ ಮಾಡಿಕೊಳ್ಳಬೇಕು. ಆದರೆ ಯಾರೂ ಸಹ ನವೀಕರಣ ಮಾಡಿಸಿಕೊಳ್ಳುತ್ತಿಲ್ಲ ಎಂದು ವಿಷಾದಿಸಿದ ಅವರು ಕೋವಿಡ್-19 ಪರಿಸ್ಥಿಯಲ್ಲಿ ಈ ಪದ್ಧತಿಯನ್ನು ಕೈಬಿಡಲಾಗಿದೆ ಎಂದರು.
ರಾಜ್ಯ ಸರಕಾರ ಕಾರ್ಮಿಕರಿಗೆ ಏನೂ ಸಹಾಯ ಮಾಡಿಲ್ಲ. ಯಾರಿಗೆ ಹಣಕಾಸು ನೆರವು ಕೊಟ್ಟಿದೆ ಹೇಳಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದಲ್ಲಿರುವ ಹೆಬ್ಟಾಳಕರ ಅವರಿಂದ ಸರಕಾರದ ಬಗ್ಗೆ ಮೆಚ್ಚುಗೆ ಮಾತುಗಳನ್ನ ನಿರೀಕ್ಷಿಸುವುದು ಸಾಧ್ಯವೇ ಎಂದು ಮರು ಪ್ರಶ್ನೆ ಹಾಕಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಕಾರ್ಮಿಕ ಇಲಾಖೆ ಕಾರ್ಮಿಕ ಉಪ ಆಯುಕ್ತರಾದ ವೆಂಕಟೇಶ ಶಿಂದಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತರಾದ ನಾಗೇಶ ಡಿ.ಜಿ,ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗೂರ, ತರುನ್ನುಮ್ ಬಂಗಾರಿ, ಇ.ಎಸ್ .ಐ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ.ಪ್ರಕಾಶ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.