ಆನ್ಲೈನ್ ಶಿಕ್ಷಣ ನಿಷೇಧ: ಅರ್ಜಿ
Team Udayavani, Jun 23, 2020, 7:12 AM IST
ಬೆಂಗಳೂರು: 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನಿಷೇಧಿಸಿ ಜೂ.15ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ವಿವಿಧ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ.ಆರ್ .ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ, ನಿಯಮಿತ ಅವಧಿಗೆ ಸೀಮಿತವಾಗಿ ಆನ್ಲೈನ್ ಶಿಕ್ಷಣಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಿದೆಯೇ? ಅದೇ ರೀತಿ ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಸಿಬಿಎಸ್ಸಿ, ಐಸಿಎಸ್ಸಿ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರದ ಈ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಜೂ.26ಕ್ಕೆ ಮುಂದೂಡಿತು.
ಕೋವಿಡ್ 19 ಹಿನ್ನೆಲೆಯಲ್ಲಿ ತಜ್ಞರ ಸಮಿತಿ ನೀಡಿದ ಅಭಿಪ್ರಾಯ ಆಧರಿಸಿ 1ರಿಂದ 5ನೇ ತರಗತಿ ಆನ್ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೋಷಕರು, ಶಾಲಾ ಆಡಳಿತ ಮಂಡಳಿ ಅವರೊಂದಿಗೆ ಇನ್ನೂ ಚರ್ಚೆ ನಡೆಯುತ್ತಿರುವಾಗಲೇ ಸರ್ಕಾರ ಈ ತಿರ್ಮಾನ ತೆಗೆದುಕೊಂಡಿದೆ. ಅಭಿಪ್ರಾಯ ಹೇಳಲು ಸಂಬಂಧಿತರಿಗೆ ಸಮರ್ಪಕ ಅವಕಾಶವೂ ನೀಡಿಲ್ಲ.
ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಮುಂದುವರಿಸಲು ಪರ್ಯಾಯ ವ್ಯವಸ್ಥೆಯನ್ನೂ ಸೂಚಿಸಿಲ್ಲ. ಏಕ ಪಕ್ಷೀಯವಾಗಿ ತೆಗೆದುಕೊಂಡಿರುವ ಸರ್ಕಾರದ ಈ ನಿರ್ಧಾರ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಹೀಗಾಗಿ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ಆದೇಶ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.