ಜಗಳೂರು ಕ್ಷೇತ್ರದ 57 ಕೆರೆಗಳಿಗೆ ಶೀಘ್ರ ನೀರು
Team Udayavani, Jun 23, 2020, 9:31 AM IST
ಜಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಗಳೂರು ಕ್ಷೇತ್ರದ 57 ಕೆರೆಗೆ ನೀರು ಹರಿದು ಬರಲಿದ್ದು, ಬರದ ನಾಡು ಎಂಬ ಹಣೆಪಟ್ಟಿಯನ್ನು ತೆಗೆದು ಹಾಕಲಾಗುವುದು ಎಂದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಸೋಮವಾರ ಹರಿಹರ ತಾಲೂಕಿನ ದೀಟೂರು ಬಳಿ ಹಾಗೂ ಹರಪನಹಳ್ಳಿ ತಾಲೂಕಿನ ಚಟ್ನಹಳ್ಳಿ ಬಳಿ 57ಕೆರೆ ನೀರು ತುಂಬಿಸುವ ಯೋಜನೆಯ ಜಾಕ್ ವೆಲ್ ಮತ್ತು ಪೈಪ್‌ಲೈನ್ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಪೈಪ್‌ಲೈನ್ ಆಳವಡಿಸಲು ಈಗಾಗಲೇ ಟ್ರಂಚ್ ಹೊಡೆದಿದ್ದು ಲೊರೊನಾ ಕಾರಣದಿಂದ 18 ಕಿಮೀ ಪೈಪ್‌ಲೈನ್ ಕಾಮಗಾರಿ ವಿಳಂಬವಾಗಿದೆ. ಆದರೂ ಕಾಮಗಾರಿಗೆ ಚುರುಕು ಮುಟ್ಟಿಸಲಾಗಿದೆ ಎಂದರು.
ಸೆಪ್ಟಂಬರ್ ಅಥವಾ ಅಕ್ಟೋಬರ್ ವೇಳೆಗೆ ತಾಲೂಕಿನ 57 ಕೆರೆಗಳಿಗೆ ನೀರು ಬರುವಂತೆ ಮಾಡಲಾಗುವುದು. ಇದು ಸಿರಿಗೆರೆ ಶ್ರೀಗಳ ಕೃಪಾಕಟಾಕ್ಷವಾಗಿದ್ದು, ಶಾಸಕ ಎಸ್ .ವಿ. ರಾಮಚಂದ್ರಪ್ಪ ಪ್ರಯತ್ನ ಹಾಗೂ ನಾನು ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ಮಂಜೂರಾತಿ ಮಾಡಿಸಿದ್ದೇನೆ. ಹರಿಹರದಲ್ಲಿ ಯಾವುದೇ ಅಡಚಣೆ ಬಂದರೂ ಮಿತ್ರ ಶಾಸಕ ರಾಮಪ್ಪನವರು ನಮಗೆ ಸಹಕರಿಸುತ್ತಾರೆ. ಅವರ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಕ್ಕೆ ತಂದು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಸಂಸದ ಸಿದ್ದೇಶ್ವರ ಅವರ ಸಹಕಾರದಿಂದ ನೀರಾವರಿ ಯೋಜನೆಗಳ ಕನಸು ನನಸಾಗುತ್ತಿದೆ. ಕೆಲವರು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಕಿವಿಗೊಡದೆ ನನ್ನ ಹಾಗೂ ಬಿಜೆಪಿ ಸರ್ಕಾರದ ಮೇಲೆ ನಂಬಿಕೆಯಿಡಿ ಎಂದು ಮನವಿ ಮಾಡಿದರು. ಹರಿಹರ ಶಾಸಕ ರಾಮಪ್ಪ ಮಾತನಾಡಿ, ಜಗಳೂರು ವಿಧಾನಸಭಾ ಕ್ಷೇತ್ರಕ್ಕೆಕೆರೆನೀರು ತುಂಬಿಸುವ ಯೋಜನೆ ಕಾಮಗಾರಿಗೆ ಅಡ್ಡಿಯಾಗದಂತೆ ನಾನು ಸಹಕಾರ ನೀಡುತ್ತೇನೆ. ನನ್ನ ಕ್ಷೇತ್ರದಲ್ಲಿ ಯಾವುದೇ ಅಡ್ಡಿ ಆತಂಕಗಳು ಬಂದರೆ ನಿಭಾಯಿಸುತ್ತೇನೆಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಹೇಶ್ ಪಲ್ಲಾಗಟ್ಟೆ, ಮುಖಂಡರಾದ ಚಟ್ನಹಳ್ಳಿ ರಾಜಪ್ಪ, ಕರ್ನಾಟಕ ನೀರಾವರಿ ನಿಗಮದ ಇಂಜಿನಿಯರ್‌ಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.