8 ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ
Team Udayavani, Jun 23, 2020, 10:25 AM IST
ಚಿಕ್ಕಮಗಳೂರು: ಜಿಲ್ಲೆ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ನೀಡಲು ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಕಾಫಿನಾಡಿನ 8 ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಆಯ್ಕೆ ಮಾಡಿದೆ.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯಾದ್ಯಂತ 483 ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಗುರುತು ಮಾಡಿದ್ದು, ಅದರಲ್ಲಿ ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳು ಸೇರಿವೆ. ಆದರೆ, ಸರ್ಕಾರದ ಅಧಿಕೃತ ಆದೇಶ ಪ್ರತಿ ಇನ್ನೂ ಖಾಸಗಿ ಆಸ್ಪತ್ರೆಗಳಿಗೆ ತಲುಪಿಲ್ಲವೆಂದು ತಿಳಿದು ಬಂದಿದೆ. ಸರ್ಕಾರ ಬಿಡುಗಡೆ ಮಾಡಿರುವ ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಚಿಕ್ಕಮಗಳೂರು ನಗರದ ಐದು ಆಸ್ಪತ್ರೆ, ಎನ್.ಆರ್.ಪುರ, ಕೊಪ್ಪ, ಕಡೂರು ತಾಲೂಕಿನಲ್ಲಿ ಒಂದೊಂದು ಆಸ್ಪತ್ರೆಯನ್ನು ಗುರುತಿಸಲಾಗಿದೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ನಲ್ಲಿರುವ ಹೋಲಿಕ್ರಾಸ್ ಆಸ್ಪತ್ರೆ, ಆಶ್ರಯ ಆಸ್ಪತ್ರೆ, ಕೆಆರ್ ಎಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ರೆಟಿಕಾರ್ನ್ ಕಣ್ಣಿನ ಆಸ್ಪತ್ರೆ, ವಾತ್ಸಲ್ಯ ಆಸ್ಪತ್ರೆ, ಕಡೂರು ಪಟ್ಟಣದಲ್ಲಿರುವ ಶ್ರೀ ಮಾರುತಿ ಆಸ್ಪತ್ರೆ, ಕೊಪ್ಪ ಪಟ್ಟಣದ ಪ್ರಶಾಮಣಿ ಆಸ್ಪತ್ರೆ ಮತ್ತು ಎನ್.ಆರ್.ಪುರ ಪಟ್ಟಣದ ಪುಷ್ಪಾ ಆಸ್ಪತ್ರೆಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ ಗುರುತಿಸಲಾಗಿದೆ.
ಸರ್ಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಈ ಸಂಬಂಧ ಚಿಕಿತ್ಸೆ ವೇಳೆ ಪಾಲಿಸಬೇಕಾದ ಮಾರ್ಗಸೂಚಿ, ಚಿಕಿತ್ಸಾ ಶುಲ್ಕಗಳ ಬಗ್ಗೆ ಅಧಿಕೃತ ಆದೇಶ ಆಸ್ಪತ್ರೆಗಳ ಮುಖ್ಯಸ್ಥರ ಕೈಸೇರಿಲ್ಲ ಎಂದು ತಿಳಿದು ಬಂದಿದ್ದು, ಆದೇಶಕ್ಕಾಗಿ ಎದುರು ನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.