ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶೆಟ್ಟರ

Team Udayavani, Jun 23, 2020, 3:20 PM IST

ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶೆಟ್ಟರ

ಹುಬ್ಬಳ್ಳಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ಗೋಕುಲ ರಸ್ತೆಯ ಕೈಗಾರಿಕಾ ವಸಾಹತು ಪ್ರದೇಶ (ಉದ್ಯಮನಗರ)ದಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಹಾಗೂ ರವಿನಗರ ಬಳಿಯ ತೋಳನಕೆರೆಯಲ್ಲಿ ನಡೆಸುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೋಮವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉದ್ಯಮದಾರರು ಸಚಿವರೊಂದಿಗೆ ಮಾತನಾಡಿ, ಸಿಸಿ ರಸ್ತೆ ಕಾಮಗಾರಿಗಾಗಿ ರಸ್ತೆ ಅಗೆದಿದ್ದರಿಂದ ಕೆಲವು ಕೈಗಾರಿಕೆಗಳು ರಸ್ತೆಯಿಂದ ಎತ್ತರ ಮಟ್ಟದಲ್ಲಿ ಆಗಿವೆ. ಇನ್ನು ಕೆಲವು ಕೈಗಾರಿಕೆಗಳು ರಸ್ತೆ ಎತ್ತರವಾಗಿದ್ದಕ್ಕೆ ನೆಲ ಮಟ್ಟಕ್ಕೆ ಹೋಗಿವೆ. ಇದರಿಂದ ಕೈಗಾರಿಕೆಗಳಿಗೆ ಭಾರವಾದ ಯಂತ್ರಗಳನ್ನು ತರಲು ತೀವ್ರ ತೊಂದರೆ ಆಗುತ್ತದೆ. ಅಲ್ಲದೆ ರಸ್ತೆಯ ಮಧ್ಯ ಭಾಗದಲ್ಲಿಯೇ ಒಳಚರಂಡಿ ಮಾರ್ಗ ಇರುವುದರಿಂದ ಹಾಗೂ ಒಳಚರಂಡಿಯ ಮುಚ್ಚಳ ಭಾಗ ಸಿಸಿ ರಸ್ತೆಯಿಂದ ತಳಮಟ್ಟದಲ್ಲಿರುವುದರಿಂದ ಪದೇ ಪದೇ ಅದು ಕಟ್ಟಿಕೊಂಡು ಸಮಸ್ಯೆಯಾಗುವ ಸಾಧ್ಯತೆಯಿದೆ. ಕಾರಣ ಗುತ್ತಿಗೆದಾರರು ಅದನ್ನು ಸರಿಪಡಿಸಿ ಸಿಸಿ ರಸ್ತೆ ಕಾಮಗಾರಿ ನಡೆಸಬೇಕು. ಇಲ್ಲವಾದರೆ ಮಳೆಗಾಲದಲ್ಲಿ ತುಂಬಾ ಸಮಸ್ಯೆಯಾಗುತ್ತದೆ ಎಂದು ಸಚಿವರಲ್ಲಿ ಕೋರಿದರು.

ಅದಕ್ಕೆ ಸಚಿವರು ಎಲ್ಲ ನ್ಯೂನತೆ ಸರಿಪಡಿಸಿಕೊಂಡು ಸಿಸಿ ರಸ್ತೆ ನಿರ್ಮಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ತೋಳನಕೆರೆಯಲ್ಲಿ ನಡೆಯುತ್ತಿರುವ ಉದ್ಯಾನವನ, ಎಸ್‌ಟಿಪಿ ಪ್ಲಾಂಟ್‌ ಹಾಗೂ ಇನ್ನಿತರೆ ಕಾಮಗಾರಿಗಳನ್ನು ಪರಿಶೀಲಿಸಿ ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಿ. ಕೆರೆಗೆ ಸುತ್ತಮುತ್ತಲಿನ ಭಾಗಗಳಿಂದ ಕೊಳಚೆ ನೀರು ಹರಿದು ಬಾರದಂತೆ ತಡೆ ಹಿಡಿಯಬೇಕು ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.

ತೋಳನಕೆರೆ ಹಿತರಕ್ಷಣಾ ಸಮಿತಿಯವರು, ಕೆರೆಯ ಸುತ್ತ ಕಾಯಿಪಲ್ಲೆ ಮಾರಾಟಕ್ಕೆ ಅವಕಾಶ ಕೊಡಬೇಡಿ. ಬೇಕಾದರೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಳಿಗೆಗಳನ್ನು ನಿರ್ಮಿಸಿದರೆ ಅನುಕೂಲವಾಗುತ್ತದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪಾಲಿಕೆಯಿಂದಾಗಲಿ, ನಮ್ಮಿಂದಾಗಲಿ ಯಾವುದೇ ರೀತಿ ಮಾರುಕಟ್ಟೆ ನಿರ್ಮಿಸಲು ಯೋಚಿಸಿಲ್ಲವೆಂದರು.

ಶಾಸಕ ಅರವಿಂದ ಬೆಲ್ಲದ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್‌ಸಿಟಿ ಯೋಜನೆಯ ಅಧಿಕಾರಿ ಶಕೀಲ ಅಹ್ಮದ ಮೊದಲಾದವರಿದ್ದರು.

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.