ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಸಣ್ಣ ದೋಷ ಕಂಡುಬಂದರೂ ನಿರ್ದಾಕ್ಷಿಣ್ಯ ಕ್ರಮ: ಸಿ.ಟಿ.ರವಿ


Team Udayavani, Jun 23, 2020, 4:54 PM IST

ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಸಣ್ಣ ದೋಷ ಕಂಡುಬಂದರೂ ನಿರ್ದಾಕ್ಷಿಣ್ಯ ಕ್ರಮ: ಸಿ.ಟಿ.ರವಿ

ಬೆಂಗಳೂರು: ನಗರದ ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಬಳಿ ನಿರ್ಮಾಣವಾಗುತ್ತಿರುವ ಕಲಾಗ್ರಾಮ ಕಟ್ಟಡದ ಕಾಮಗಾರಿ ಕಳಪೆಯಾಗಿರುವುದು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ.

ಇಂದು ಕಲಾಗ್ರಾಮಕ್ಕೆ ಭೇಟಿ ನೀಡಿ ಕಟ್ಟಡ ಕಾಮಗಾರಿ ಹಾಗೂ ಇಲ್ಲಿನ ಚಟುವಟಿಕೆಗಳ ಕುರಿತಂತೆ ಅವರು ಪರಿಶೀಲನೆ ನಡೆಸಿದರು.

ಕಲಾಗ್ರಾಮ ಕಟ್ಟಡ ನಿರ್ಮಾಣದಲ್ಲಿ ಯಾವುದೇ ರೀತಿಯ ಕಳಪೆ ಕಾಮಗಾರಿ ನಡೆಯಬಾರದು. ಒಂದು ವೇಳೆ ಎಲ್ಲಾದರೂ ಸಣ್ಣಪುಟ್ಟ ದೋಷ ಕಂಡುಬಂದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸುವುದಾಗಿ ಹೇಳಿದರು.

ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಆರ್ಥಿಕ ಇತಿಮಿತಿಯೊಳಗೆ ಕಟ್ಟಡವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಆದಷ್ಟು ಶೀಘ್ರವಾಗಿ ಇಲ್ಲಿ ಪೂರ್ಣ ಪ್ರಮಾಣದ ಚಟುವಟಿಕೆಗಳು ಆರಂಭವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಪ್ರಗತಿಯಲ್ಲಿರುವ ಕಾಮಗಾರಿ ಪೂರ್ಣಗೊಳ್ಳಲು ಸುಮಾರು 30 ಕೋಟಿ ಅನುದಾನದ ಅಗತ್ಯವಿದೆ. ಮುಂದಿನ ಆಯವ್ಯಯದಲ್ಲಿ ಈ ಹಣವನ್ನು ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ನಮಗೆ ಅನುದಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಕಲಾಗ್ರಾಮದ ಸಮಗ್ರ ಅಭಿವೃದ್ಧಿಗೆ ರಾಜ್ಯಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ನೀಡಲು ಉದ್ದೇಶಿಸಿರುವ ಅನುದಾನದ ಮಂಜೂರಾತಿ ಪಡೆಯಲು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಲಲಿತಕಲೆ ಹಾಗೂ ಶಿಲ್ಪಕಲೆಗಳ ಚಟುವಟಿಕೆಗೆ ಕಲಾಗ್ರಾಮವು ಅತ್ಯಂತ ಪ್ರಶಸ್ಥ ಸ್ಥಳವಾಗಿದೆ. ಈ ಕಾರಣ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಬೆಂಗಳೂರು ನಗರ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಆಡಳಿತ ಭವನದ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಕಲಾಭವನವನ್ನು ಸುವರ್ಣ ಸಮುಚ್ಛಯದ ಐಹೊಳೆಯ ದುರ್ಗಿ ಗುಡಿ ಮಾದರಿಯಲ್ಲಿ ನಿರ್ಮಿಸಲಾಗಿದೆ. ಒಟ್ಟು ಮೂರು ಮಹಡಿಗಳನ್ನು ಹೊಂದಿದ್ದು, ಸಮುಚ್ಛಯದಲ್ಲಿ 300 ಆಸನಗಳುಳ್ಳ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ಎರಡು ಪ್ರಸಾದನ ಕೊಠಡಿ, ಒಂದು ರಂಗ ಪರದೆ ಮತ್ತು ವಸ್ತುಗಳನ್ನು ಕಾಯ್ದಿರಿಸಲು ಕೊಠಡಿ ನಿರ್ಮಾಣ, ಕುವೆಂಪು ಭಾಷಾಭಾರತಿ ಪ್ರಾಕಾರದಲ್ಲಿ ಅವರ ಮನೆಯ ಮಾದರಿಯಂತೆ ಆಡಳಿತ ಕಚೇರಿಯನ್ನು ವಿಶ್ವಚೇತನ ಮತ್ತು ಅನುವಾದ ಕಮ್ಮಟ ಹಾಗೂ ಡಿಪ್ಲೊಮಾ ಕೋರ್ಸ್‍ಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.

ಕಲಾಗ್ರಾಮದ ಪ್ರವೇಶದ್ವಾರದ ಪಕ್ಕದಲ್ಲಿ ಟೈಮ್ ಆಫೀಸ್ ನಿರ್ಮಿಸಲಾಗಿದೆ. ಕುವೆಂಪು ಭಾಷಾಭಾರತಿ ಪ್ರಾಕಾರದ ಪ್ರಕಟಣೆಗಳನ್ನು ಮಾರಾಟ ಮಾಡಲು ಇದರಿಂದ ಅನುಕೂಲವಾಗಲಿದೆ. ಸಾಹಿತಿಗಳು, ಕಲಾವಿದರು, ಶಿಲ್ಪಿಗಳು ಸೃಜನಶೀಲ ಕಾರ್ಯಗಳನ್ನು ನಡೆಸಿಕೊಡಲು ನಾಲ್ಕು ಕುಟೀರಗಳನ್ನು ನಿರ್ಮಾಣ ಮಾಡಲಾಗಿದೆ. ಉಳಿದ ಎರಡು ಕೊಠಡಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

11-highcourt

High Court: ಕ್ರಿಮಿನಲ್‌ ಕೇಸ್‌ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.