ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ


Team Udayavani, Jun 24, 2020, 5:53 AM IST

mys sidhdhate

ಮೈಸೂರು: ಕೋವಿಡ್‌-19 ಹಿನ್ನೆಲೆ ಲಾಕ್‌ಡೌನ್‌ ನಿಂದಾಗಿ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಾಳೆಯಿಂದ ನಡೆಯಲಿದ್ದು, ಜಿಲ್ಲಾದ್ಯಂತ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಗೆ ಸಿದ್ಧತೆ ಮಾಡಲಾಗಿದೆ.  ಜಿಲ್ಲೆಯಲ್ಲಿ ಜೂ.25ರಿಂದ ಜುಲೈ 4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲವೂ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸ್ಯಾನಿಟೈಸ್‌ ಮಾಡಲಾಗಿದೆ.

ಜಿಲ್ಲೆಯಲ್ಲಿ 39,822 ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320  ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್‌ ಪರೀಕ್ಷಾ  ಕೇಂದ್ರ ತೆರೆಯಲಾಗಿದೆ.

ಪ್ರತ್ಯೇಕ ಕೊಠಡಿ: ಈಗಾಗಲೇ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿ ಕಂಟೈನ್ಮೆಂಟ್‌ ಜೋನ್‌ಗೆ ಒಳಪಟ್ಟ ಪ್ರದೇಶದಿಂದ ಬರುವ ವಿದ್ಯಾರ್ಥಿಗಳನ್ನು ಪರೀಕ್ಷಿಸಿ, ಅವರು ಪ್ರತ್ಯೇಕ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆಯಲು ವ್ಯವಸ್ಥೆ  ಮಾಡಲಾಗಿದೆ. ಜೊತೆಗೆ ಕಂಟೈನ್ಮೆಂಟ್‌ ಜೋನಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಸಂಘ, ಸಂಸ್ಥೆಗಳಿಂದ ಮಾಸ್ಕ್: ಎಸ್ಸೆಸ್ಸೆಲ್ಸಿ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಗರದ ಹಲವು ಸಂಘ ಸಂಸ್ಥೆಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಮಾಸ್ಕ್ಗಳನ್ನು ನೀಡಿವೆ. ಜೊತೆಗೆ ಇಲಾಖೆಯಿಂದ ಪ್ರತಿ  ಪರೀಕ್ಷಾ ಕೇಂದ್ರಗಳಿಗೆ 2ರಿಂದ 3ರಂತೆ ಥರ್ಮಲ್‌ ಸ್ಕ್ರೀನಿಂಗ್‌ ಮಾಪನ ಹಾಗೂ ಸ್ಯಾನಿಟೈಸರ್‌ ನೀಡಲಾಗಿದೆ. ಮಂಗಳವಾರವೇ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್‌ ಮಾಡಲಾಗಿದೆ. ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ.

ಮಕ್ಕಳ ತಪಾಸಣೆ: ಪರೀಕ್ಷಾ ದಿನದಂದು ಬೆಳಗ್ಗೆ 7.30ಕ್ಕೆ ಪರೀಕ್ಷಾ ಕೇಂದ್ರಗಳನ್ನು ತೆರೆಯ ಲಾಗುವುದು. ವಿದ್ಯಾರ್ಥಿಗಳು ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸ್‌ಗೆ ಒಳಪಡಿಸಿದ ಬಳಿಕ ತಮ್ಮ ನಿಗದಿತ ಆಸನದಲ್ಲಿ ಕುಳಿತು ಓದಿಕೊಳ್ಳು ವಂತೆ ತಿಳಿಸಲಾಗಿದೆ. ಅಲ್ಲದೇ ಜೂ.24ರಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ತಮ್ಮ ಆಸನದ ಸ್ಥಳ ಮತ್ತು ಕೊಠಡಿ ನೋಡಿಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ.

ಉಚಿತ ಸಾರಿಗೆ: ವಿದ್ಯಾರ್ಥಿಗಳನ್ನು ಅವರವರ ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಶಿಕ್ಷಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗಾಗಿ 54  ಬಸ್‌ಗಳನ್ನು ಬಳಸಿಕೊಳ್ಳ ಲಾಗುವುದು. ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯೂ ಸಾರಿಗೆ ಸಂಸ್ಥೆಗೆ ನೀಡಿ ಉಚಿತವಾಗಿ ಪರೀಕ್ಷಾ ಕೇಂದ್ರ ಗಳಿಗೆ ಕರೆತರುವ ವ್ಯವಸ್ಥೆ ಮಾಡಲಾಗಿದೆ.

ಸಹಾಯವಾಣಿ: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಗೊಂದಲ ನಿವಾರಣೆಗೆ ಈಗಾಗಲೇ ಎಲ್ಲಾ ತಾಲೂಕು ಮತ್ತು ನಗರ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ  ನೀಡುವ ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ಮಾಸ್ಕ್, ಸ್ಯಾನಿಟೈ ಸರ್‌, ತಪಾಸಣೆ, ಆರೋಗ್ಯ ಸಿಬ್ಬಂದಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪೋಷಕರಿಗೆ ಆತಂಕ ಬೇಡ, ಗೊಂದಲ ವಿಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ನಿರಾತಂಕ ವಾಗಿ ಪರೀಕ್ಷೆ  ಬರೆಯಬಹುದು. ಒಂದು ವೇಳೆ ಸಮಸ್ಯೆ ಗಳಿದ್ದಲ್ಲಿ ಸಹಾಯವಾಣಿ ಅಥವಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು. 
-ಪಾಂಡುರಂಗ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.