ಗುರು ರಾಘವೇಂದ್ರ ಬ್ಯಾಂಕ್ ಹಗರಣ: ವರದಿ ಸಲ್ಲಿಸಲು ಇಡಿಗೆ ನಿರ್ದೇಶನ
Team Udayavani, Jun 24, 2020, 6:01 AM IST
ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ನಿರ್ದೇಶನ ನೀಡಿದೆ.
ಹಗರಣದ ತನಿಖೆಗೆ ಡಿಜಿಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ. ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಕರಣದ ಸಂಬಂಧ ಎಸಿಬಿ ಮತ್ತು ಸಿಐಡಿ ಎರಡೂ ಪ್ರತ್ಯೇಕ ಎಫ್‌ಐಆರ್ ಗಳನ್ನು ದಾಖಲಿಸಿವೆ.
ಅವುಗಳನ್ನು ಒಂದೇ ಕಡೆ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿತು. ಅಲ್ಲದೆ, ಆರ್‌ಬಿಐ ಸದ್ಯ ಠೇವಣಿದಾರರ ಹಣ ವಾಪಸ್ ಮಿತಿಯನ್ನು 1 ಲಕ್ಷಕ್ಕೆ ಹೆಚ್ಚಿಸಿದೆ. ಆ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಠೇವಣಿದಾರರು ಜೂ.22ರಂದು ನೀಡಿರುವ ಮನವಿಯನ್ನು ಪರಿಗಣಿಸುವಂತೆ ನಿರ್ದೇಶನ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜು.1ಕ್ಕೆ ಮುಂದೂಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಆನ್‌ಲೈನ್ ಮೂಲಕ ಠೇವಣಿ ಹಣ ವರ್ಗಾವಣೆ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಪೀಠ, ಹಗರಣ ಸಂಬಂಧ ಬಾಣಸವಾಡಿ ಹಾಗೂ ಬಸವನಗುಡಿ ಪೊಲೀಸರ ವಿರುದ ಕ್ರಮ ಕೈಗೊಂಡಿರುವ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಿತು. ರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯ್ದೆಯಡಿ ಸೊಸೈಟಿ ಮತ್ತು ಬ್ಯಾಂಕ್‌ನ ಕೆಲವು ಪದಾಧಿಕಾರಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.