ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿ
Team Udayavani, Jun 24, 2020, 6:51 AM IST
ತುರುವೇಕೆರೆ: ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ದಾನಿ ಗಳಿಂದ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಊಟ, ತಿಂಡಿ ಕೊಡಿಸಬಾರದು ಎಂದು ತಹಶೀಲ್ದಾರ್ ಆರ್. ನಯೀಂ ಉನ್ನೀಸಾ ಮುಖ್ಯ ಶಿಕ್ಷಕರಿಗೆ ಸೂಚಿಸಿದರು.
ಪಟ್ಟಣದ ಜೆಪಿ ಆಂಗ್ಲಪ್ರೌಢ ಶಾಲಾ ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಕೋವಿಡ್-19ರ ಹಿನ್ನೆಲೆಯಲ್ಲಿ ಮಕ್ಕಳು ಮತ್ತು ಪೋಷಕರ ಭಯ ದೂರ ಮಾಡಿ ಅವರಲ್ಲಿ ಆತ್ಮಸ್ಥೆçರ್ಯ ತುಂಬಿ. ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಕಾಪಾಡಲು ನಿಮ್ಮ ಹತ್ತಿರದ ಗ್ರಾಪಂ ಹಾಗೂ ಪಪಂಗಳ ನೆರವು ಪಡೆಯಿರಿ ಎಂದರು.
ಎಲ್ಲ ಕೇಂದ್ರಗಳಲ್ಲಿ ಪೊಲೀಸ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿ ನಿಯೋಜಿಸ ಲಾಗುವುದು. ತುರ್ತು ಚಿಕಿತ್ಸಾ ಕಿಟ್ ವ್ಯವಸ್ಥೆ ಮಾಡಲಾಗುವುದು. ಮಾಸ್ಕ್ ಧರಿಸುವುದು ಕಡ್ಡಾಯ. ಮುಖ್ಯವಾಗಿ ಅಂತರ ಕಾಯ್ದುಕೊಳ್ಳುವಂತೆ ನೋಡಿ ಕೊಳ್ಳಿ, ಒಟ್ಟಾರೆಯಾಗಿ ಯಾವ ಮಕ್ಕಳೂ ಸಹ ಸೌಕರ್ಯಗಳ ಸಮಸ್ಯೆಯಿಂದ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಬಿಇಒ ಸಿ.ರಂಗಧಾಮಯ್ಯ ಮಾತ ನಾಡಿ, ತಾಲೂಕಿನ ಎಲ್ಲ ಕೇಂದ್ರಗಳಲ್ಲಿ 2016 ಮಕ್ಕಳು ಪರೀಕ್ಷೆ ಬರೆಯಲಿದ್ದು, ಹೊರ ತಾಲೂಕುಗಳಿಂದ ಇಲ್ಲಿಗೆ 46 ಮಕ್ಕಳು ಪರೀಕ್ಷೆ ಬರೆಯಲು ಬಂದಿದ್ದಾರೆ ಎಂದು ಹೇಳಿದರು. ಪಪಂ ಮಾಜಿ ಸದಸ್ಯ ಎ.ಆರ್. ಜಯರಾಮ್, ಟಿಎಚ್‌ಒ ಡಾ. ಸುಪ್ರಿಯಾ, ಸಹಾಯಕ ಕೃಷಿ ನಿರ್ದೇಶಕ ಪ್ರಮೋದ್, ಬಿಆರ್‌ಸಿ ವಸಂತ್ ಕುಮಾರ್, ರೋಟರಿ ಅಧ್ಯಕ್ಷ ಗುಪ್ತಾ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.