ದೇಸಿ ವೆಂಟಿಲೇಟರ್‌ಗೆ ಆದ್ಯತೆ


Team Udayavani, Jun 24, 2020, 9:53 AM IST

ದೇಸಿ ವೆಂಟಿಲೇಟರ್‌ಗೆ ಆದ್ಯತೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಇನ್ನು ಮುಂದೆ ದೇಶದಲ್ಲೇ ತಯಾರಾದ ವೆಂಟಿಲೇಟರ್‌ಗಳನ್ನು ಖರೀದಿಸಿ ಬಳಸಲು ಕೇಂದ್ರ ಸರಕಾರ ಆದ್ಯತೆ ನೀಡಲಿದೆ. ಪಿಎಂ ಕೇರ್ ನಿಧಿಯಲ್ಲಿ ಮೀಸಲಿಟ್ಟ ಹಣದಲ್ಲಿ 50 ಸಾವಿರ ಮೇಡ್‌ ಇನ್‌ ಇಂಡಿಯಾ ವೆಂಟಿಲೇಟರ್‌ಗಳನ್ನು ಈಗಾಗಲೇ ಅದು ಖರೀದಿಸಿದೆ.

ಈ ಪೈಕಿ ಸುಮಾರು 3 ಸಾವಿರ ವೆಂಟಿಲೇ ಟರ್‌ಗಳು ಸಿದ್ಧವಾಗಿದ್ದು, 1,300 ಸಾಧನ ಗಳನ್ನು ವಿವಿಧ ರಾಜ್ಯಗಳಿಗೆ ಕಳುಹಿಸಿ ಕೊಡಲಾಗಿದೆ. ಕೊರೊನಾ ಸೋಂಕಿನ ವಿರುದ್ಧದ ಹೋರಾಟಕ್ಕಾಗಿ 3,100 ಕೋಟಿ ರೂ.ಗಳನ್ನು ಮೀಸಲಿರಿಸಿದ್ದ ಪಿಎಂ ಕೇರ್ ಟ್ರಸ್ಟ್‌ ವಲಸೆ ಕಾರ್ಮಿಕರ ಕಾಳಜಿ, ವೆಂಟಿಲೇಟರ್‌ಗಳ ಖರೀದಿ ಮತ್ತು ಕೊರೊನಾ ತಡೆಗೆ ಅಗತ್ಯವಿರುವ ಇತರ ವೆಚ್ಚಗಳಿಗೆ ಈ ಹಣ ಬಳಸುವುದಾಗಿ ತಿಳಿಸಿತ್ತು. ಪ್ರಸ್ತುತ ಈ ಹಣದಲ್ಲಿ 2 ಸಾವಿರ ಕೋಟಿ ರೂ.ಗಳನ್ನು ಭಾರತದಲ್ಲೇ ತಯಾರಾಗುವ 50 ಸಾವಿರ ವೆಂಟಿಲೇಟರ್‌ಗಳ ಖರೀದಿಗೆ ವಿನಿಯೋಗಿಸ ಲಾಗಿದೆ. ಬಾಕಿ 1,100 ಕೋಟಿ ರೂ.ಗಳನ್ನು ವಲಸೆ ಕಾರ್ಮಿಕರ ಕಲ್ಯಾಣಕ್ಕೆ ಬಳಸುವಂತೆ ಸೂಚಿಸಿ ವಿವಿಧ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳಿದೆ.

ಇದುವರೆಗೆ 2,923 ವೆಂಟಿಲೇಟರ್‌ಗಳು ಸಿದ್ಧವಾಗಿದ್ದು, ಆ ಪೈಕಿ 1,340 ಸಾಧನಗಳು ಈಗಾಗಲೇ ಮಹಾರಾಷ್ಟ್ರ (275), ದಿಲ್ಲಿ (275), ಗುಜರಾತ್‌ (175), ಬಿಹಾರ (100), ಕರ್ನಾಟಕ (90), ರಾಜಸ್ಥಾನ (75) ಸೇರಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತಲುಪಿವೆ. ಈ ತಿಂಗಳ ಅಂತ್ಯದ ವೇಳೆಗೆ ಇನ್ನೂ 14 ಸಾವಿರ ವೆಂಟಿ ಲೇಟರ್‌ಗಳನ್ನು ರಾಜ್ಯಗಳಿಗೆ ಕಳುಹಿಸಿಕೊಡಲಾಗುತ್ತಿದೆ. 30 ಸಾವಿರ ವೆಂಟಿಲೇಟರ್‌ಗಳನ್ನು ಸರಕಾರಿ ಸ್ವಾಮ್ಯದ ಭಾರತ್‌ ಎಲೆಕ್ಟ್ರಾನಿಕ್ಸ್‌ ತಯಾರಿ ಸುತ್ತಿದ್ದರೆ ಉಳಿದ 20 ಸಾವಿರ ಸಾಧನಗಳನ್ನು ಎಜಿವಿಎ ಹೆಲ್ತ್‌ಕೇರ್‌ (10 ಸಾವಿರ), ಎಎಂಟಿಜೆಡ್‌ ಬೇಸಿಕ್‌ (5,650), ಎಎಂಟಿಜಡ್‌ ಹೈ ಎಂಡ್‌ (4 ಸಾವಿರ) ಮತ್ತು ಅಲೈಡ್‌ ಮೆಡಿಕಲ್‌ (350) ಸಂಸ್ಥೆಗಳು ಸಿದ್ಧಪಡಿಸಿ ಕೊಡಲಿವೆ.

ಆತ್ಮನಿರ್ಭರ ಭಾರತ
ಸರಕಾರಿ ಕಚೇರಿಗಳಿಗೆ ಬೇಕಾದ ಸಾಮಗ್ರಿಗಳನ್ನು ಕೊಳ್ಳುವ ಉದ್ದೇಶಕ್ಕಾಗಿಯೇ ಇರುವ ಗವರ್ಮೆಂಟ್‌ ಇ- ಮಾರ್ಕೆಟ್‌ ಪ್ಲೇಸ್‌ನಲ್ಲಿ (ಜಿಇಎಂ) ಸರಕು ಮಾರಾಟ ಮಾಡು ವವರು ಆ ಸರಕುಗಳು ಯಾವ ದೇಶದ ಉತ್ಪನ್ನ ಎಂದು ನಮೂದಿಸಲು ಕೇಂದ್ರ ಸರಕಾರ ಆದೇಶ ಹೊರಡಿ ಸಿದೆ. ಈ ಮೂಲಕ ಆತ್ಮನಿರ್ಭರ ಭಾರತದ ಕನಸನ್ನು ನನಸಾಗಿಸಲು ಕೈ ಜೋಡಿಸ ಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.