ಶಿಕ್ಷಕರ ವಿಶೇಷ ಭತ್ತೆ ಹಿಂಪಡೆಯುವುದು ತಪ್ಪು : ಭೋಜೇಗೌಡ
Team Udayavani, Jun 24, 2020, 10:38 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜು ಶಿಕ್ಷಕರ ವಿಶೇಷ ಭತ್ತೆಯನ್ನು ವಾಪಸ್ ಪಡೆಯುವ ರಾಜ್ಯ ಸರಕಾರದ ತೀರ್ಮಾನವು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇ ಗೌಡ ಹೇಳಿದ್ದಾರೆ. ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲ ಅರ್ಹ ಶಿಕ್ಷಕರಿಗೆ ವಿಶೇಷ ಭತ್ತೆ ಒದಗಿಸಬೇಕು. ಇಲ್ಲದಿದ್ದರೆ ಸರಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.
2008ರ ಮೊದಲು ನೇಮಕಗೊಂಡಿದ್ದ ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆ ಮತ್ತು ಪಿಯುಸಿ ಶಿಕ್ಷಕರಿಗೆ ವಿಶೇಷ ಭತ್ತೆ ನೀಡಲು ಸರಕಾರ ತೀರ್ಮಾನಿಸಿ 8 ಕೋಟಿ ರೂ. ಬಿಡುಗಡೆ ಮಾಡಿತ್ತು. ತಮಗೂ ವಿಶೇಷ ಭತ್ತೆ ನೀಡುವಂತೆ ಇತರ ಶಿಕ್ಷಕರು ಕೂಡ ನ್ಯಾಯಾಲಯದ ಮೆಟ್ಟಲೇರಿದ್ದು, ಹೋರಾಟಕ್ಕೆ ಗೆಲುವು ಲಭಿಸಿದೆ. ಕೋರ್ಟ್ ಆದೇಶದ ಬಳಿಕ ಸರಕಾರವು ಬಾಕಿ ಇರುವ ಶಿಕ್ಷಕರಿಗೆ ವಿಶೇಷ ಭತ್ತೆ ವಿತರಿಸುವ ಬದಲು ಈಗಾಗಲೇ ವಿತರಿಸಿರುವ ಭತ್ತೆಯನ್ನು ವಾಪಸ್ ಪಡೆಯಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.
ಕೋವಿಡ್: ಸರಕಾರ ವಿಫಲ
ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ವಿವಿಧ ವಿಭಾಗಗಳ ಜನರಿಗೆ ನೆರವು ಘೋಷಿಸಿದ್ದು, ಫಲಾನುಭವಿಗಳನ್ನು ಗುರುತಿಸುವ ಕೆಲಸ ಇನ್ನೂ ಪೂರ್ತಿ ಯಾಗಿಲ್ಲ. ಚಿಕ್ಕಮಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರಗಳಿಲ್ಲ. ಅಲ್ಲಿನ ಶಂಕಿತ ರೋಗಿಗಳ ಮಾದರಿಗಳನ್ನು ಹಾಸನಕ್ಕೆ ಕಳುಹಿಸಲಾಗುತ್ತಿದೆ. ಮಂಗಳೂರಿನಲ್ಲಿ 13 ವೆಂಟಿಲೇಟರ್‌ಗಳು ಮಾತ್ರ ಇದ್ದು, ಮುಂಜಾಗ್ರತಾ ಕ್ರಮವಾಗಿ ಇನ್ನಷ್ಟು ಅಗತ್ಯ ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.