ಬೀದರನಲ್ಲಿ ಮತ್ತೆ ಕೋವಿಡ್ ಆರ್ಭಟ

ನಿನ್ನೆ 22 ಪಾಸಿಟಿವ್‌  524ಕ್ಕೇರಿದ ಸೋಂಕಿತರ ಸಂಖ್ಯೆ 42 ಜನ ಗುಣಮುಖ ಹಳ್ಳಿ ಹಳ್ಳಿಗೂ ವ್ಯಾಪಿಸಿದ ಹೆಮ್ಮಾರಿ

Team Udayavani, Jun 24, 2020, 12:06 PM IST

24-June-05

ಬೀದರ: ಗಡಿ ನಾಡು ಬೀದರನಲ್ಲಿ ಸೋಮವಾರವಷ್ಟೇ ಕೊಂಚ ತಗ್ಗಿದ್ದ ಕೋವಿಡ್ ವೈರಸ್‌ ಮಂಗಳವಾರ ಮತ್ತೆ ಆರ್ಭಟಿಸಿದ್ದು, ಮೂರು ವರ್ಷದ ಮಗು ಸೇರಿ 22 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 524ಕ್ಕೆ ಏರಿಕೆ ಆಗಿದೆ. ಇನ್ನೊಂದೆಡೆ 42 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.

ಒಂದು ವಾರ ಕಾಲ ಕೋವಿಡ್ ನಿಂದ ಸರಣಿ ಸಾವಿನಿಂದ ಕಂಗೆಟ್ಟಿದ್ದ ಬೀದರ ಜನತೆ ಸೋಮವಾರ ಸ್ವಲ್ಪ ಮಟ್ಟಿಗೆ ನಿಟ್ಟಿಸಿರುವ ಬಿಟ್ಟಿದ್ದರು. ಆದರೆ, ಮಂಗಳವಾರ 22 ಸೋಂಕಿತರು ಪತ್ತೆಯಾಗಿದ್ದು, ಬಹುತೇಕರು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಸೇರಿದವರಾಗಿದ್ದಾರೆ. 6 ಸೋಂಕಿತರು ಪಿ-7090 ರೋಗಿಯ ಸಂಪರ್ಕದಿಂದ, 11 ಕೇಸ್‌ ಮಹಾರಾಷ್ಟ್ರ ಮತ್ತು 2 ಕೇಸ್‌ ಗಳು ತೆಲಂಗಾಣಾ ಸಂಪರ್ಕದಿಂದ ವೈರಸ್‌ ವಕ್ಕರಿಸಿದೆ.

ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ಅತಿ ಹೆಚ್ಚು ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಕಮಲನಗರ ತಾಲೂಕಿನ ಹಾರೋಹಳ್ಳಿ ಗ್ರಾಮದ 4, ಕೊಟಗ್ಯಾಳ್‌, ಹಕ್ಯಾಳ್‌, ಹೊಳಸಮುದ್ರ, ಮುರ್ಕಿ ಮತ್ತು ಹಾಲಹಳ್ಳಿ ಗ್ರಾಮದ ತಲಾ 2, ಹೊಕ್ರಾಣಾ, ಬಳತ (ಕೆ) ಮತ್ತು ಕಮಲನಗರ ಪಟ್ಟಣದಲ್ಲಿ ತಲಾ 1 ಕೇಸ್‌ಗಳು ಪತ್ತೆಯಾಗಿದ್ದರೆ, ಬೀದರ ನಗರದಲ್ಲಿ 3 ಹಾಗೂ ಔರಾದ ಪಟ್ಟಣದಲ್ಲಿ 2 ಪ್ರಕರಣಗಳು ವರದಿಯಾಗಿವೆ.

22 ವರ್ಷದ ಪುರುಷ (ಪಿ-9611), 48 ವರ್ಷದ ಮಹಿಳೆ (ಪಿ-9612), 39 ವರ್ಷದ ಮಹಿಳೆ (ಪಿ-9613), 17 ವರ್ಷದ ಯುವಕ (ಪಿ-9614), 56 ವರ್ಷದ ಮಹಿಳೆ (ಪಿ-9615), 51 ವರ್ಷದ ಮಹಿಳೆ (ಪಿ-9616), 54 ವರ್ಷದ ಪುರುಷ (ಪಿ-9617), 40 ವರ್ಷದ ಪುರುಷ (ಪಿ-9618), 34 ವರ್ಷದ ಮಹಿಳೆ (ಪಿ-9619), 35 ವರ್ಷದ ಮಹಿಳೆ (ಪಿ-9620), 10 ವರ್ಷದ ಬಾಲಕಿ (ಪಿ-9621), 40 ವರ್ಷದ ಮಹಿಳೆ (ಪಿ-9622), 65 ವರ್ಷದ ವೃದ್ಧೆ (ಪಿ-9623), 3 ವರ್ಷದ ಹೆಣ್ಣುಮಗು (ಪಿ-9624), 49 ವರ್ಷದ ಪುರುಷ (ಪಿ-9625), 19 ವರ್ಷದ ಯುವಕ (ಪಿ-9626), 20 ವರ್ಷದ ಮಹಿಳೆ (ಪಿ-9627), 49 ವರ್ಷದ ಪುರುಷ (ಪಿ-9628), 23 ವರ್ಷದ ಪುರುಷ (ಪಿ-9629), 19 ವರ್ಷದ ಯುವತಿ (ಪಿ-9630), 30 ವರ್ಷದ ಮಹಿಳೆ (ಪಿ-9631) ಮತ್ತು 23 ವರ್ಷದ ಮಹಿಳೆ (ಪಿ-9632) ರೋಗಿಗಳಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 524 ಪಾಸಿಟಿವ್‌ ಪ್ರಕರಣಗಳು ವರದಿಯಾದಂತಾಗಿದೆ. ಅದರಲ್ಲಿ 15 ಜನ ಸಾವನ್ನಪ್ಪಿದ್ದರೆ 366 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇನ್ನೂ 143 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.