ಕೋವಿಡ್ ತಡೆಗೆ ಪಾಕಿಸ್ಥಾನದ ಸ್ಮಾರ್ಟ್ ತಂತ್ರ
Team Udayavani, Jun 24, 2020, 12:50 PM IST
ಸಾಂದರ್ಭಿಕ ಚಿತ್ರ
ಕರಾಚಿ: ಪಾಕಿಸ್ಥಾನದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸರಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಯೋಜನೆಯೊಂದನ್ನು ಸಿದ್ಧಪಡಿಸಿದೆ. ಸ್ಮಾರ್ಟ್ ಲಾಕ್‌ಡೌನ್ ಎಂಬ ಹೆಸರಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಮೇ ಅಂತ್ಯದಲ್ಲಿ ದೇಶದಲ್ಲಿ ಅಳವಡಿಸಿದ್ದ ಲಾಕ್‌ಡೌನ್ ನಿಯಮ ಸಡಿಲಿಕೆ ಮಾಡಿದ್ದ ಸರಕಾರ ಇದೀಗ ಹೊಸ ತಂತ್ರವನ್ನು ಸಿದ್ಧಪಡಿಸಿದೆ.
ಏನಿದು ಸ್ಮಾರ್ಟ್ ಲಾಕ್‌ಡೌನ್?
ಅತೀ ಹೆಚ್ಚು ಕೋವಿಡ್ ಸೋಂಕಿತರಿರುವವ 5 ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮಾತ್ರ ಲಾಕ್‌ಡೌನ್ ಜಾರಿಗೊಳಿಸಲಾಗುತ್ತದೆ. ಇದರೊಂದಿಗೆ ಲಾಕ್‌ಡೌನ್ ಪ್ರದೇಶದಲ್ಲಿರುವವರಿಗೆ ಇಲ್ಲಿನವರಿಗೆ ಯಾವುದೇ ಹೊರ ಪ್ರದೇಶಗಳ ಸಂಪರ್ಕಕ್ಕೆ ಅವಕಾಶವಿಲ್ಲ. ಪಾಕ್‌ನ ಆರೋಗ್ಯ ಅಧಿಕಾರಿಗಳ ನಿರ್ದೇಶನದಂತೆ ಸ್ಮಾರ್ಟ್ ತಂತ್ರವನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭಿಸಿದೆ. ಸದ್ಯದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿದರೆ ಸಂಪೂರ್ಣ ಲಾಕ್‌ಡೌನ್ ಅಸಾಧ್ಯ. ಆದರೆ ಹೆಚ್ಚುತ್ತಿರುವ ವೈರಸ್ ತಡೆಗೆ ಏನಾದರೂ ಯೋಜನೆ ಸಿದ್ಧಗೊಳಿಸಲೇ ಬೇಕಿದೆ ಎಂಬುದು ಅಧಿಕಾರಿಗಳ ಹೇಳಿಕೆ. ಒಂದು ವಾರದಿಂದ ಸೋಂಕು ಅತಿ ಹೆಚ್ಚು ಹರಡುತ್ತಿರುವ ದೇಶಗಳಲ್ಲಿ ಪಾಕಿಸ್ಥಾನವೂ ಒಂದು ಎಂಬ ಮಾಹಿತಿಯನ್ನು ವಿಶ್ವಸಂಸ್ಥೆ ನೀಡಿದೆ. ಸೋಮವಾರ ದೇಶಾದ್ಯಂತ 3946 ಸೋಂಕಿತರು ಕಂಡು ಬಂದಿದ್ದು 15 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳಿಲ್ಲ. ಆದ್ದರಿಂದ ಸೋಂಕು ತಡೆಯುವುದು ಸವಾಲಾಗಿದೆ. ಪ್ರಸ್ತುತ ಆ ದೇಶದಲ್ಲಿ 185034 ಮಂದಿ ಸೋಂಕಿತರಿದ್ದಾರೆ. 3,695 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.