ಕಾಮಾಲೆ-ಡೆಂಘೀ ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮನವಿ
Team Udayavani, Jun 24, 2020, 2:52 PM IST
ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕಾಮಾಲೆ ರೋಗ ಮತ್ತು ಡೆಂಘೀ ಜ್ವರದ ಕುರಿತು ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಗಾಗಿ ಹೋರಾಟ ಸಮಿತಿ ವತಿಯಿಂದ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ನಗರದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಅರುಣಕುಮಾರ ಮೂಲಕ ಮಂಗಳವಾರ ಮನವಿ ಸಲ್ಲಿಸಲಾಯಿತು.
ಕಾಮಾಲೆ ರೊಗ ಸಾಂಕ್ರಾಮಿಕ ರೋಗವಾಗಿದ್ದು, ಈಗಾಗಲೆ ನಗರದಲ್ಲಿ 200ಕ್ಕೂ ಹೆಚ್ಚು ಮಕ್ಕಳಿಗೆ ರೋಗ ಲಕ್ಷಣ ಕಂಡುಬಂದ ಮಾಹಿತಿ ಇದೆ. ನಗರದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಚರಂಡಿಗಳ ಸ್ವಚ್ಛತೆ, ಔಷಧಿಗಳ ಸಿಂಪಡಣೆಗೆ ನಗರದ ಆರೋಗ್ಯ ಇಲಾಖೆ ಹಾಗೂ ನಗರಸಭೆ ಹೆಚ್ಚಿನ ಗಮನಹರಿಸಬೇಕು ಎಂದು ಮನವಿ ಮೂಲಕ ಆಗ್ರಹಿಸಲಾಗಿದೆ.
ಸಮಿತಿ ಅಧ್ಯಕ್ಷ ಅಕ್ರಂ ಖಾನ್, ಉಪಾಧ್ಯಕ್ಷ ಅಬ್ದುಲ್ ವಹಾಬ ಬಾನ್ಸಾರಿ, ಸದಸ್ಯರಾದ ವಕೀಲ ರಾಘವೇಂದ್ರ ಗಡೆಪ್ಪನವರ, ಬಾಬಾಸಾಬ ಜಮಾದಾರ, ಶಿವಾನಂದ ಗಗ್ಗರಿ, ಕನ್ನಡ ರಕ್ಷಣಾ ವೇದಿಕೆಯ ಸ್ಥಳೀಯ ಘಟಕದ ಅಧ್ಯಕ್ಷ ಪ್ರವೀಣ ಕೋಠಾರಿ, ಜಹಾಂಗೀರ ಸಾಬ, ಮಹಮ್ಮದ್ ಸನದಿ, ಗೌಸ್ ಯರಗಟ್ಟಿ, ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.