ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ವ ಸಿದ್ಧತೆ

ಜಿಲ್ಲೆಯ 84 ಕೇಂದ್ರಗಳಲ್ಲಿ ನಡೆಯಲಿದೆ ಪರೀಕ್ಷೆ ಎಲ್ಲ ವಿದ್ಯಾರ್ಥಿಗಳ ತಪಾಸಣೆ: ರಮೇಶ್‌

Team Udayavani, Jun 24, 2020, 1:38 PM IST

24-June-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ಜಿಲ್ಲೆಯಲ್ಲಿ ಜೂನ್‌ 25 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು 84 ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಜಿಲ್ಲೆಯಲ್ಲಿ ಈ ಬಾರಿ 24,904 ವಿದ್ಯಾರ್ಥಿಗಳು ಹಾಗೂ 2 ಖಾಸಗಿ ಕೇಂದ್ರಗಳಲ್ಲಿ ಖಾಸಗಿಯಾಗಿ 610 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಬಯಸಿದ ವಿದ್ಯಾರ್ಥಿಗಳಿಗಾಗಿ 142 ಖಾಸಗಿ ಬಸ್‌ ಹಾಗೂ 56 ಸರ್ಕಾರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ದಿನಂಪ್ರತಿ ಓಡಾಡುವ ಸರ್ಕಾರಿ ಬಸ್‌ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 7ಕ್ಕೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಮಾಡಲಾಗಿದೆ. ತಾತ್ಕಾಲಿಕವಾಗಿ ಹಾಸ್ಟೆಲ್‌ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‌ ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್‌ ತಿಳಿಸಿದ್ದಾರೆ.

ಪರೀಕ್ಷಾ  ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ 144 ನಿಷೇದಾಜ್ಞೆ ಜಾರಿಗೊಳಿಸಿದ್ದು, ಕೇಂದ್ರಗಳ ಸುತ್ತಾ ಇರುವ ಎಲ್ಲಾ ಜೆರಾಕ್ಸ್‌ ಮತ್ತು ಸೈಬರ್‌ ಸೇವಾ ಕೇಂದ್ರಗಳನ್ನು ಮುಚ್ಚಲು ಜಿಲ್ಲಾ ಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣಾ ವ್ಯವಸ್ಥೆ ಕಲ್ಪಿಸಲಾಗಿದೆ.

ಕೊಠಡಿಯೊಳಗೆ ಬೆಳಗ್ಗೆ 8.30 ರಿಂದ ಪ್ರವೇಶಾವಕಾಶವಿದ್ದು, 10 ಗಂಟೆಯ ತನಕ ಮಕ್ಕಳು ಕೊಠಡಿಯಲ್ಲಿ ಅಭ್ಯಾಸ ಮಾಡಿಕೊಂಡು ನಂತರ ಬ್ಯಾಗನ್ನು ಕೊಠಡಿ ಹೊರಭಾಗದಲ್ಲಿ ಶೇಖರಿಸಿಡುವುದು. ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳ ಮೇಲೆ ಹೆಸರು ಮತ್ತು ನೋಂದಣಿ ಸಂಖ್ಯೆಯನ್ನು ಹಾಕುವುದು. ಮೊಬೈಲ್‌ ಮತ್ತು ವಿದ್ಯುದ್ಮಾನ ಉಪಕರಣಗಳನ್ನು ನಿಷೇಧಿಸಿದೆ. ಬೇಸಿಕ್‌ ವಾಚ್‌ನ್ನು ತರಲು ಅವಕಾಶ ಮಾಡಿಕೊಡಲಾಗಿದೆ.

ಕೇಂದ್ರಗಳನ್ನು ಪರೀಕ್ಷೆಗೆ 2 ದಿನ ಮುನ್ನಾ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದ್ದು, ಪೋಷಕರು ಮತ್ತು ಮಕ್ಕಳು ಆತಂಕಪಡುವ ಅಗತ್ಯವಿಲ್ಲ ಹಾಗೂ ಪ್ರತಿ ದಿನ ಪರೀಕ್ಷೆ ಮುಗಿದ ಮೇಲೆ ಪುನಃ ರಸಾಯನಿಕಗಳಿಂದ ಶುದ್ಧೀಕರಿಸಲಾಗುವುದು. ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಮಕ್ಕಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಮಾಸ್ಕ್ಗಳನ್ನು ಕಡ್ಡಾಯವಾಗಿ ಹಾಕಿಕೊಂಡು ಬರುವುದು.

ಖಾಸಗಿ ಶಾಲೆಗಳ ಮತ್ತು ಒಪ್ಪಂದದ ಮೇಲೆ ಮಾರ್ಗಗಳಲ್ಲಿ ಬರುವ ಸರ್ಕಾರಿ ಬಸ್‌ಗಳಿಗೆ ಈಗಾಗಲೇ ನೀಡಿರುವ ಸಮಯಕ್ಕೆ ಸರಿಯಾಗಿ ಸಿದ್ಧರಾಗಿ ಪಿಕ್‌ಅಪ್‌ ಪಾಯಿಂಟ್‌ಗಳಲ್ಲಿ ಇರಬೇಕು. ಬಸ್‌ನಲ್ಲಿ ಬರುವ ಮಕ್ಕಳು ಶಾಲೆಗೆ ಆಗಮಿಸಿದ ಬಸ್‌ನಲ್ಲೇ ವಾಪಸ್‌ ಹೋಗುವುದು. ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡ ಖಾಸಗಿ ಅಭ್ಯರ್ಥಿಗಳಿಗೆ ಪ್ರತಿ ತಾಲೂಕು ಕೇಂದ್ರದ ಬಸ್‌ ನಿಲ್ದಾಣದಿಂದ ಜಿಲ್ಲಾ ಕೇಂದ್ರದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಬಸ್‌ ವ್ಯವಸ್ಥೆಯನ್ನು ಮಾಡಲಾಗಿದ್ದು, ಖಾಸಗಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಡಿಡಿಪಿಐ ತಿಳಿಸಿದ್ದಾರೆ.

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.