ಕೋವಿಡ್ ನಿಂದ ಶಿಸ್ತಿನ ಪಾಠ
Team Udayavani, Jun 24, 2020, 5:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶೃಂಗೇರಿ: ಕೋವಿಡ್-19 ನಮಗೆ ಶಿಸ್ತಿನ ಪಾಠ ಕಲಿಸಿದೆ. ಇದರಿಂದ ನಮ್ಮ ಸೇವಾ ಚಟುವಟಿಕೆ ಕುಂಠಿತಗೊಂಡಿದ್ದರೂ ನಮಗಿರುವ ಸೇವಾ ಅವಕಾಶ ಬಳಸಿಕೊಂಡು ಸೇವೆ ಮಾಡಲಾಗಿದೆ ಎಂದು ಲಯನ್ಸ್ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಹೇಳಿದರು.
ಪಟ್ಟಣದ ಹೊರವಲಯದ ಶಾರದಾ ಕಂಫರ್ಟ್ಸ್ ನಲ್ಲಿ ಲಯನ್ಸ್ ಕ್ಲಬ್ ಏರ್ಪಡಿಸಿದ್ದ ಲಯನ್ಸ್ ರಾಜ್ಯಪಾಲರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾತನಾಡಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕ್ಲಬ್‌ನಿಂದ 90 ಲಕ್ಷ ರೂ.ವೆಚ್ಚದ ವೆಂಟಿಲೇಟರ್ ಸಹಿತ ವೈದ್ಯಕೀಯ ಉಪಕರಣ ನೀಡಲಾಗಿದೆ. ಜಿಲ್ಲೆಯಲ್ಲೂ ಕ್ಲಬ್‌ನಿಂದ ಅನೇಕ ಸೇವಾ ಕಾರ್ಯ ಮಾಡಲಾಗಿದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಬೇಗಾನೆ ವಿವೇಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯಪಾಲರು ಇದಕ್ಕೂ ಮೊದಲು ಪಟ್ಟಣದ ವಿವಿಧೆಡೆ ಮಾರ್ಗಸೂಚಿ ಫಲಕ,ನವೀಕರಿಸಿದ ಬಸ್ ನಿಲ್ದಾಣ ಉದ್ಘಾಟಿಸಿದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗೆ ಧನಸಹಾಯ ಮಾಡಲಾಯಿತು. ವೇದಿಕೆಯಲ್ಲಿ ಎಚ್.ಜಿ.ವೆಂಕಟೇಶ್, ಅನಿತಾ ಗೋಮ್ಸ್, ಸಂದೀಪ್ ಶೆಟ್ಟಿ, ವಸಂತಕುಮಾರ ಶೆಟ್ಟಿ, ಜಗದೀಶ ನಾಯ್ಕ, ಡಾ| ಸೀತಾರಾಮ, ಉಮೇಶ್ ಪುದುವಾಳ್, ಎಚ್.ಕೆ.ಸುಬ್ರಹ್ಮಣ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.