ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಕರ್ಯ
Team Udayavani, Jun 24, 2020, 5:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಸವಕಲ್ಯಾಣ: ಜೂ.25ರಿಂದ ಜು.4ರವರೆಗೆ ತಾಲೂಕಿನ 19 ಕೇಂದ್ರ ಹಾಗೂ 5 ಉಪಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದ ಪ್ರಕಾರ ಎಲ್ಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ, ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ಪರೀಕ್ಷೆ ಕೇಂದ್ರಗಳಲ್ಲಿ ಇಬ್ಬರು ದೈಹಿಕ ಶಿಕ್ಷಕರು, ಇಬ್ಬರು ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಹಾಗೂ 5 ಜನ ಶಿಕ್ಷಕರು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಮಕ್ಕಳ ಅನೂಕುಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಯಾವ ಊರಿಗೆ ಸೌಕರ್ಯ ಇರುವುದಿಲ್ಲವೊ ಅಂಥಹ ಕಡೆ ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‌ಗಳನ್ನು ಬಳಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ನಿಗದಿ ಪಡಿಸಿದ ಸಮಯಕ್ಕಿಂತ 2 ತಾಸು ಮುಂಚೆ ಕೇಂದ್ರಕ್ಕೆ ಹಾಜರಾಗಬೇಕು. ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ವಿದ್ಯಾರ್ಥಿಗಳ ಜತೆ ಪೋಷಕರು ಬರಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.