ಸುರಕ್ಷತಾ ಕ್ರಮಗಳೊಂದಿಗೆ ಭಯವಿಲ್ಲದೇ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಸಿಎಂ ಶುಭಹಾರೈಕೆ
Team Udayavani, Jun 24, 2020, 9:14 PM IST
ಬೆಂಗಳೂರು: ಕೋವಿಡ್ 19 ಸಂಬಂಧಿತ ಲಾಕ್ ಡೌನ್ ಕಾರಣದಿಂದ ಕಳೆದ ಮಾರ್ಚ್-ಎಪ್ರಿಲ್ ತಿಂಗಳಿನಲ್ಲಿ ನಡೆಯಬೇಕಾಗಿದ್ದ SSLC ಪರೀಕ್ಷೆ ಮುಂದೂಡಲ್ಪಟ್ಟಿತ್ತು.
ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿ ಜೂನ್ 25ರಿಂದ ಜುಲೈ 04ರವರೆಗೆ ನಡೆಯಲಿದೆ ಎಂದು ಪ್ರಕಟಿಸಿತ್ತು.
ಈ ಪ್ರಕಾರವಾಗಿ ರಾಜ್ಯಾದ್ಯಂತ ಕೋವಿಡ್ 19 ಸೋಂಕಿನ ಆರ್ಭಟ ಜೋರಾಗಿದ್ದರೂ SSLC ಪರೀಕ್ಷೆಯನ್ನು ನಡೆಸಲು ಇಲಾಖೆಯು ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ. ಸುಮಾರು 8,48,203 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಈ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಹೆತ್ತವರಿಗೆ ಧೈರ್ಯ ತುಂಬುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶುಭ ಹಾರೈಕೆಗಳನ್ನು ಕೋರಿದ್ದಾರೆ.
ಮತ್ತು ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸರಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ವೈ ಅವರು ಇದೇ ಸಂದರ್ಭದಲ್ಲಿ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು .
ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. 1/2
— CM of Karnataka (@CMofKarnataka) June 24, 2020
ಪರೀಕ್ಷೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರುವ ಸಂದರ್ಭದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಬರುವಂತೆ ಹಾಗೂ ಸ್ಯಾನಿಟೈಸರ್ ಗಳನ್ನು ಬಳಸುವಂತೆ ಮುಖ್ಯಮಂತ್ರಿಯವರು ಕಿವಿಮಾತು ಹೇಳಿದ್ದಾರೆ.
ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರೊಂದಿಗೆ ಪರೀಕ್ಷೆಯನ್ನು ನಡೆಸಲು ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆಯೂ ಬಿ.ಎಸ್.ವೈ. ಅವರು SSLC ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದ್ದಾರೆ.
ಮತ್ತು ಅಂತಿಮವಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಯಾವುದೇ ಭಯ ಮತ್ತು ಆತಂಕವಿಲ್ಲದೇ ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸನ್ನು ಪಡೆಯುವಂತೆ ಮುಖ್ಯಮಂತ್ರಿಯವರು ಎಲ್ಲಾ ವಿದ್ಯಾರ್ಥಿಗಳೂ ಶುಭ ಹಾರೈಸಿದ್ದಾರೆ.
2/2
ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ.
ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.
— CM of Karnataka (@CMofKarnataka) June 24, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.