ಸಯನೈಡ್ ಮೋಹನ್: ಕೊನೆಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ;ಎಲ್ಲ ಪ್ರಕರಣಗಳ ವಿಚಾರಣೆ ಮುಕ್ತಾಯ
Team Udayavani, Jun 25, 2020, 6:39 AM IST
ಸರಣಿ ಸ್ತ್ರೀ ಹಂತಕ ಸಯನೈಡ್ ಮೋಹನ್.
ಮಂಗಳೂರು: ಸರಣಿ ಸ್ತ್ರೀ ಹಂತಕ ಸಯನೈಡ್ ಮೋಹನ್‌ನಿಗೆ 20ನೇ ಹಾಗೂ ಕೊನೆಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿದೆ.
ಕೇರಳದ ಕಾಸರಗೋಡಿನ ಕುಂಟಾರು ಗ್ರಾಮದ 25 ವರ್ಷದ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಸಯನೈಡ್ ಮಾತ್ರೆ ನೀಡಿ ಕೊಲೆ ಮಾಡಿದ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜೂ. 20ರಂದು ಸಾಬೀತಾಗಿದ್ದು, ಜೂ. 24ರಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರಾದ ಸಯೀನುನ್ನಿಸಾ ಘೋಷಿಸಿದರು. ಇದರೊಂದಿಗೆ ಸುದೀರ್ಘ 9 ವರ್ಷಗಳ ವಿಚಾರಣೆ ಮುಕ್ತಾಯಗೊಂಡಿದೆ.
ಶಿಕ್ಷೆಯ ವಿವರ
ಕೊಲೆ ಅಪರಾಧಕ್ಕಾಗಿ (ಐಪಿಸಿ ಸೆ. 302) ಜೀವಾವಧಿ ಶಿಕ್ಷೆ, 25,000 ರೂ.ದಂಡ, ಅಪಹರಣಕ್ಕೆ (ಐಪಿಸಿ 366) 10 ವರ್ಷ ಶಿಕ್ಷೆ, 5,000 ರೂ. ದಂಡ, ಅತ್ಯಾಚಾರ (ಐಪಿಸಿ 376) ಅಪರಾಧಕ್ಕೆ 7 ವರ್ಷ ಸಜೆ, 5,000 ರೂ. ದಂಡ, ವಿಷ ಪದಾರ್ಥ (ಸಯನೈಡ್) ಉಣಿಸಿದ (ಐಪಿಸಿ 328) ಅಪರಾಧಕ್ಕೆ 10 ವರ್ಷ ಶಿಕ್ಷೆ, 5,000 ರೂ. ದಂಡ, ಚಿನ್ನಾಭರಣ ಸುಲಿಗೆ (ಐಪಿಸಿ 392) ಅಪರಾಧಕ್ಕೆ 5 ವರ್ಷ ಕಠಿನ ಸಜೆ, 5,000 ರೂ. ದಂಡ, ವಿಷ ಉಣಿಸಿ ಸುಲಿಗೆ ಮಾಡಿದ (ಐಪಿಸಿ 394) ಅಪರಾಧಕ್ಕೆ 10 ವರ್ಷ ಕಠಿನ ಸಜೆ, 5,000 ರೂ. ದಂಡ, ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ (ಐಪಿಸಿ 417) ಅಪರಾಧಕ್ಕೆ 1 ವರ್ಷ ಶಿಕ್ಷೆ, ಸಾಕ್ಷ್ಯ ನಾಶ (ಐಪಿಸಿ 201) ಅಪರಾಧಕ್ಕೆ 7 ವರ್ಷ ಸಜೆ, 5,000 ರೂ. ದಂಡ ಶಿಕ್ಷೆಯನ್ನು ವಿಧಿಸಲಾಗಿದೆ.
ಕೊನೆಯ ಪ್ರಕರಣದಲ್ಲಿ ಮೃತ ಯುವತಿಯ ವಿಸ್ರಾ ಪರೀಕ್ಷೆಯಲ್ಲಿ ಸಯನೈಡ್ ಅಂಶ ಇರುವುದು ದೃಢವಾಗಿತ್ತು. 46 ಸಾಕ್ಷಿಗಳ ವಿಚಾರಣೆ, 89 ದಾಖಲಾತಿಗಳನ್ನು ಹಾಗೂ 31 ಸೊತ್ತುಗಳನ್ನು ಹಾಜರು ಪಡಿಸಲಾಗಿತ್ತು. ಯುವತಿಯಿಂದ ಸುಲಿಗೆ ಮಾಡಿದ್ದ ಚಿನ್ನಾಭರಣಗಳ ಪೈಕಿ ಒಂದು ಪೆಂಡೆಂಟ್ ಮೋಹನನ 2ನೇ ಪತ್ನಿಯ ಮನೆಯಿಂದ ವಶಪಡಿಸಿದ್ದು, ಅದನ್ನು ಕುಂಟಾರಿನ ಯುವತಿಯ ತಾಯಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಒ.ಎಂ. ಕ್ರಾಸ್ತಾ ಅವರು ಈ ಮೊದಲು ಹಾಗೂ ಪ್ರಸ್ತುತ ಜಯರಾಮ ಶೆಟ್ಟಿ ವಾದಿಸಿದ್ದರು.
2009ರಲ್ಲಿ ಮೋಹನ್ ಬಂಧಿತನಾಗಿದ್ದು, 2012ರಲ್ಲಿ ನ್ಯಾಯಾಲಯದ ವಿಚಾರಣೆ ಆರಂಭವಾಗಿತ್ತು. ಮೊದಲ 3 ಪ್ರಕರಣಗಳು ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಲ್ಲಿ, ಆ ಬಳಿಕ ಉಳಿದ 17 ಪ್ರಕರಣಗಳ ವಿಚಾರಣೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದೆ. 2013 ಡಿ. 20ರಂದು ಮೊದಲ 2 ಪ್ರಕರಣಗಳಲ್ಲಿ ಶಿಕ್ಷೆ ಪ್ರಕಟವಾಗಿತ್ತು. ಮೋಹನನ ಪಾಶಕ್ಕೆ ಸಿಲುಕಿ ಬದುಕುಳಿದ ಓರ್ವ ಯುವತಿ, ಆತ ಕರೆದಲ್ಲಿಗೆ ಹೋಗದ ಇನ್ನೋರ್ವ ಯುವತಿ ಹಾಗೂ ಬಂಟ್ವಾಳದ ದೇವಸ್ಥಾನವೊಂದರ ಅರ್ಚಕ ಹೇಳಿದ ಸಾಕ್ಷಿಗಳು ಮೋಹನನ ಮೇಲಣ ಆರೋಪಗಳನ್ನು ಸಾಬೀತು ಪಡಿಸುವಲ್ಲಿ ನಿರ್ಣಾಯಕ ಎನಿಸಿದವು. ಇದರೊಂದಿಗೆ ಸುದೀರ್ಘ 9 ವರ್ಷಗಳ ವಿಚಾರಣೆ ಮುಕ್ತಾಯಗೊಂಡಿದೆ.
5ರಲ್ಲಿ ಮರಣ ದಂಡನೆ, 10ರಲ್ಲಿ ಜೀವಾವಧಿ, 5ರಲ್ಲಿ ಖುಲಾಸೆ
ಸಯನೈಡ್ ಮೋಹನನ ವಿರುದ್ಧ ದಾಖಲಾದ ಒಟ್ಟು 20 ಯುವತಿಯರ ಕೊಲೆ ಪ್ರಕರಣಗಳ ಪೈಕಿ 5ರಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಪೈಕಿ 1 ಪ್ರಕರಣದಲ್ಲಿ ಹೈಕೋರ್ಟ್ ಮರಣ ದಂಡನೆಯನ್ನು ದೃಢೀಕರಿಸಿದೆ. 1ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ.
ಇನ್ನೊಂದು ಪ್ರಕರಣವನ್ನು ರದ್ದು ಪಡಿಸಿದೆ. ಇನ್ನೆರಡು ಪ್ರಕರಣಗಳು ಹೈಕೋರ್ಟ್‌ನ ತೀರ್ಮಾನಕ್ಕೆ ಬಾಕಿ ಇವೆ. 10 ಪ್ರಕರಣಗಳಲ್ಲಿ ಜೀವಾವಧಿ ಸಜೆಯಾಗಿದೆ. 5 ಪ್ರಕರಣಗಳು ಖುಲಾಸೆಗೊಂಡಿವೆ. ಲಭ್ಯ ಮಾಹಿತಿ ಪ್ರಕಾರ 5 ಪ್ರಕರಣಗಳಲ್ಲಿ ಮರಣ ದಂಡನೆ ಮತ್ತು 10ರಲ್ಲಿ ಜೀವಾವಧಿ ಶಿಕ್ಷೆ ಆಗುವುದು ರಾಜ್ಯದಲ್ಲಿ ಇದೆ ಮೊದಲು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.