8 ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಚನೆ


Team Udayavani, Jun 25, 2020, 5:01 AM IST

8-khasagiu

ಮೈಸೂರು: ನಗರದಲ್ಲಿ ಅಗತ್ಯ ಸಿಬ್ಬಂದಿ, ವೈದ್ಯಕೀಯ ಸೌಕರ್ಯಗಳು ಮತ್ತು ಸಲಕರಣೆಗಳು ಇರುವ 8 ಖಾಸಗಿ ಆಸ್ಪತ್ರೆಗಳನ್ನು ಕೋವಿಡ್‌ 19 ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಸಂಪರ್ಕಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.  ಶಂಕರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವ ಕಾರಣ ಖಾಸಗಿ ಆಸ್ಪತ್ರೆಗಳನ್ನು ಚಿಕಿತ್ಸೆಗೆ ಸಂಪರ್ಕಿಸಲಾಗಿದೆ.

ಒಂದೆರಡು ಆಸ್ಪತ್ರೆ  ಬಿಟ್ಟರೆ ಮತ್ಯಾರೂ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಸಿದ್ಧತೆ ಮಾಡಿಕೊಂಡಿರುವವರೂ ಚಿಕಿತ್ಸೆ ನೀಡಲು ಒಪ್ಪಿಗೆ ಸೂಚಿಸುವ ಸ್ಥಿತಿಯಲ್ಲಿಲ್ಲ. ಮನವರಿಕೆ ಮಾಡಿಕೊಟ್ಟಿದ್ದೇವೆ. ಒಂದು ವೇಳೆ ಅವರು ಒಪ್ಪಿದರೆ ವೆಚ್ಚ ಭರಿಸಲು ಶಕ್ತಿ  ಇರುವವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಕೋವಿಡ್‌ 19 ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಹಾಗೂ ಇತರ ಸಿಬ್ಬಂದಿ ಮಿಕ್ಕ ರೋಗಿಗಳ ಬಳಿ ಹೋಗಬಾರದು.

ಈ ಷರತ್ತುಗಳ ಅನುಸಾರ ಖಾಸಗಿ ಆಸ್ಪತ್ರೆಗಳು ಸಿದ್ಧತೆ  ಮಾಡಿಕೊಳ್ಳಬೇಕು ಎಂದರು. ಮುಂದಿನ ದಿನಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾನವ ಸಂಪನ್ಮೂಲದ ಕೊರತೆಯಾಗಬಹುದು. ಏಕೆಂದರೆ ಒಮ್ಮ ಚಿಕಿತ್ಸೆ ನೀಡಿದ ಸಿಬ್ಬಂದಿ 14 ದಿನ ಕ್ವಾಂರಂಟೈನ್‌ನಲ್ಲಿ ಇರಬೇಕಾಗುತ್ತದೆ. ಮುಂದೆ  ಸಿಬ್ಬಂದಿ ಕೊರತೆ ಎದುರಾಗುವ ಸಾಧ್ಯತೆಗಳೂ ಇದೆ. ಜಿಲ್ಲೆಗೆ ಬೆಂಗಳೂರು, ತಮಿಳುನಾಡಿನಿಂದಬರುತ್ತಿರುವವರಲ್ಲಿ ಹೆಚ್ಚು ಪಾಸಿಟಿವ್‌ ಕೇಸ್‌ಗಳು ಬರುತ್ತಿವೆ. ನಾವು ಮಾನಸಿಕವಾಗಿ ಇನ್ನೂ ಹೆಚ್ಚಿನ ಪ್ರಕರಣ ನೋಡಲು ತಯಾರಾಗಿರಬೇಕು  ಎಂದರು.

ವಿವಿಧೆಡೆ ಪೂರಕ ಸಿದ್ಧತೆ: ವಿವಿ ಪುರಂ ಮೆಟರ್ನಿಟಿ ಆಸ್ಪತ್ರೆಯನ್ನು ಕೋವಿಡ್‌ ಸೋಂಕಿತ ಗರ್ಭಿಣಿಯರಿಗೆ ಬಳಸಲಾಗುತ್ತದೆ. ನಗರದ ವಿವಿಧೆಡೆ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ಗಳನ್ನು ಗುರುತಿಸಲಾಗಿದೆ. ಇಎಸ್‌ಐ ಆಸ್ಪತ್ರೆಯಲ್ಲಿಯೂ  100 ಬೆಡ್‌ ಗಳಿದ್ದು, ಅಗತ್ಯವಿದ್ದಾಗ ಅದನ್ನೂ ಕೋವಿಡ್‌ ಹೆಲ್ತ… ಕೇರ್‌ ಸೆಂಟರ್‌ ಆಗಿ ಬಳಸಿಕೊಳ್ಳಲಾಗುತ್ತದೆ. ವಿಮಾನ ನಿಲ್ದಾಣದ ಹಿಂಭಾಗದಲ್ಲಿರುವ ಮುಕ್ತ ವಿವಿ ಕಟ್ಟಡ ಬಳಸಿಕೊಳ್ಳುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.