ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮವಹಿಸಿ
Team Udayavani, Jun 25, 2020, 6:21 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆರೋಗ್ಯದ ಸುರಕ್ಷತೆ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಜಿಲ್ಲೆಯಲ್ಲಿ ಪರೀಕ್ಷೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಅಗತ್ಯ ಸಿದ್ಧತೆ ಮಾಡಿಕೊಂಡು ಎಲ್ಲಾ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಎದುರಿಸಲು ಶಿಕ್ಷಕರು, ಪೋಷಕರು ವಿದ್ಯಾರ್ಥಿಳಿಗೆ ಆತ್ಮಸ್ಥೈರ್ಯ ತುಂಬಬೇಕು.
ಕೋವಿಡ್ -19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.ವಿದ್ಯಾರ್ಥಿಗಳು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಮೂಲಕ ಕೋವಿಡ್ 19 ನಿಗ್ರಹಕ್ಕೆ ಕೈಜೋಡಿಸಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್, ಎಸ್ಪಿ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯೋಗೇಶ್‌ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ನಾಗೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.