ಅನವಶ್ಯಕವಾಗಿ ತಿರುಗಾಡಿದರೆ ದಂಡ ವಿಧಿಸಿ
Team Udayavani, Jun 25, 2020, 6:24 AM IST
ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಮುಂಜಾಗ್ರತಾ ಕ್ರಮ ಪಾಲಿಸದಿರುವುರಿಂದ ಅತಿ ಹೆಚ್ಚು ಕೊವೀಡ್-19 ಪ್ರಕರಣ ನಗರ ಪ್ರದೇಶಗಳಲ್ಲಿ ದಾಖಲಾಗುತ್ತಿದ್ದು ಅನವಶ್ಯಕವಾಗಿ ತಿರುಗಾಡುವವರಿಗೆ ದಂಡ ವಿಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋವಿಡ್ 19 ನಿಯಂತ್ರಣಕ್ಕಾಗಿ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಹೋಟೆಲ್, ರಸ್ತೆ ಬದಿಯ ಅಂಗಡಿಗಳವರು ಯಾವುದೇ ರೀತಿಯ ಮುಖಗವಸು, ಸಾಮಾಜಿಕ ಅಂತರ, ಸ್ವಚ್ಛತೆ ಕಾಪಾಡುತ್ತಿಲ್ಲ. ಹೀಗಾಗಿ ಸಾಕಷ್ಟು ದೂರುಗಳು ಬರುತ್ತಿವೆ.
ಕೂಡಲೇ ಇಂತಹವರಿಗೆ ಹತ್ತಿರದ ನೋಡಲ್ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು. ಈ ಹಿಂದೆ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಕೊವೀಡ್-19 ಈಗ ಹಳ್ಳಿಗಳಿಗೂ ವ್ಯಾಪಿಸಿದ್ದು ಹಳ್ಳಿಗಳಿಗೆ ಗ್ರಾಪಂ ಪಿಡಿಒ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.
ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕೋವಿಡ್ -19 ಎಲ್ಲಿ ಯಾವಾಗ ಯಾರಿಗೆ ಬರುತ್ತದೆ ಎಂದು ನಿಖರವಾಗಿ ಹೇಳುವುದಕ್ಕೆ ಆಗುವುದಿಲ್ಲ. ಎಲ್ಲರು ಎಚ್ಚರಿಕೆಯಿಂದ ಇರಬೇಕು ಎಂದರು. ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಫೌಜಿಯಾ ತರನ್ನುಮ್, ನಗರಾಭಿವೃದಿಟಛಿ ಪ್ರಾಧಿಕಾರದ ಆಯುಕ್ತ ಭಾಸ್ಕರ್, ತಹಶೀಲ್ದಾರ್ ನಾಗಪ್ರಶಾಂತ್, ನಗರಸಭೆ ಆಯುಕ್ತ ಲೋಹಿತ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.