ಪರಿಷ್ಕೃತ ಮಾರ್ಗಸೂಚಿಗೆ ನಾಗಾಭರಣ ಒತ್ತಾಯ
Team Udayavani, Jun 25, 2020, 7:12 AM IST
ಬೆಂಗಳೂರು: ಯುಜಿಸಿ ಅಧ್ಯಾಪಕರಿಗೆ ಪುನಶ್ಚೇತನ ಶಿಬಿರಗಳ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಪ್ರಾದೇಶಿಕ ಭಾಷೆಗಳ ಬದಲಿಗೆ “ಇಂಡಿಯನ್ ಲಿಟ್ರೇಚರ್ ಆಂಡ್ ಕಲ್ಚರ್’ ಎಂದು ಬದಲಾಯಿಸಿರುವುದು ಪ್ರಾದೇಶಿಕ ಭಾಷೆಗಳ ಕಲಿಕೆ, ಬೋಧನೆ ಹಾಗೂ ಬೆಳವಣಿಗೆಗೆ ವಿರುದ್ಧವಾದ ನಡೆ ಎಂದು ಕನ್ನಡ ಅಭಿವೃದಿಟಛಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕನ್ನಡ (ಪ್ರಾದೇಶಿಕ ಭಾಷೆಯಲ್ಲಿ) ಅಧ್ಯಾಪಕರ ಸ್ಥಾನೀಕರಣಕ್ಕೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ (ಕನ್ನಡ) ಪುನಶ್ಚೇತನ ಶಿಬಿರಗಳನ್ನು ನಡೆಸುವುದು ಅಗತ್ಯ ಹಾಗೂ ಅನಿವಾರ್ಯ. ಆದರೆ ಯುಜಿಸಿಯ ನಿಯಮಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಪುನಶ್ಚೇತನ ಶಿಬಿರಗಳನ್ನು ನಡೆಸಲು ಅವಕಾಶ ಇಲ್ಲವೆಂದು ರಾಜ್ಯದ ಕನ್ನಡ ಪ್ರಾಧ್ಯಾಪಕರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಈ ಸಂಬಂಧ ಕ್ರಮಕೈಗೊಳ್ಳುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಸಂಬಂಧ ಕೂಡಲೇ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸು ವಂತೆ ಆಯೋಗಕ್ಕೆ ಟಿ. ಎಸ್. ನಾಗಾಭರಣ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.