ಮಣಿಪುರ ಕಾಂಗ್ರೆಸ್ ನಾಯಕ ಓಕ್ರಾಮ್ಗೆ ಸಿಬಿಐ ಸಮನ್ಸ್
Team Udayavani, Jun 25, 2020, 8:53 AM IST
ಕೇಂದ್ರದಿಂದ ಸಿಬಿಐ ದುರ್ಬಳಕೆ: ಕಾಂಗ್ರೆಸ್ ಆರೋಪ
ಇಂಫಾಲ: ಮಣಿಪುರದಲ್ಲಿ ಬಿಜೆಪಿ ಸರಕಾರ ಅಲ್ಪಮತಕ್ಕೆ ಕುಸಿದಿದ್ದು, ಸರಕಾರ ರಚಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ಗೆ ಸಿಬಿಐ ಸಮನ್ಸ್ ನೀಡಿದೆ. ಈ ಕುರಿತು ಪ್ರತಿಕ್ರಿಯಿ ಸಿರುವ ಕಾಂಗ್ರೆಸ್, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಿಬಿಐ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ರಾಜಕೀಯ ದುರುದ್ದೇಶದಿಂದ ಸಿಬಿಐ ಸಮನ್ಸ್ ನೀಡಲಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ವಿಧಾನಸಭೆ ಯಲ್ಲಿ ವಿಶ್ವಾಸ ಮತ ಸಾಬೀತುಪಡಿಸಲು ಕೇಂದ್ರ ಸರಕಾರವು ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಓಕ್ರಾಮ್ ಇಬೋಬಿ ಸಿಂಗ್ ವಿರುದ್ಧ 2019ರಲ್ಲಿ 332 ಕೋಟಿ ರೂ.ಮೊತ್ತದ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. ಕಳೆದ ವಾರ 9 ಶಾಸಕರು ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದರಿಂದ ಸರಕಾರ ಅಲ್ಪಮತಕ್ಕೆ ಕುಸಿದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.