ಹಲವು ವರ್ಗದವರಿಗೆ ಪರಿಹಾರ
Team Udayavani, Jun 25, 2020, 12:26 PM IST
ಸಾಂದರ್ಭಿಕ ಚಿತ್ರ
ಧಾರವಾಡ: ಲಾಕ್‌ಡೌನ್ ಕಾರಣದಿಂದ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರ ಹಲವು ವರ್ಗದವರಿಗೆ ಪರಿಹಾರ ಘೋಷಿಸಿದೆ. ಅದರಲ್ಲಿ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಒಂದು ಬಾರಿ ಪರಿಹಾರವಾಗಿ ಒಂದು ಬಾರಿ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುವುದು.
ಈ ವೃತ್ತಿಯಲ್ಲಿ ತೊಡಗಿರುವ ಜನರು ಆನ್‌ಲೈನ್‌ನಲ್ಲಿ ಸೇವಾಸಿಂಧು https://sevasindhu.karnataka.gov.in ಪೋರ್ಟ್‌ಲ್‌ನಲ್ಲಿ ಅರ್ಜಿ ಸಲ್ಲಿಸಿದಲ್ಲಿ, ಅವುಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರ ವರ್ಗಾಯಿಸಲಾಗುತ್ತದೆ. 18 ರಿಂದ 65 ವರ್ಷದೊಳಗಿನ ವ್ಯಕ್ತಿಗಳಿಗೆ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ. ಅಗಸ ಹಾಗೂ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಢೀಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿಪಿಎಲ್ ಕಾರ್ಡ್, ಆಧಾರ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜನ್ಮದಿನಾಂಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.